ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್’ ಯೋಜನೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಕಳೆದ ಏಳು ವರ್ಷಗಳಿಂದ ಸಾಗಿ ಬಂದಿರುವ ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವ ಅಭಿಯಾನವು ಇಂದು ಹೊಸ ಹಂತವನ್ನು ಪ್ರವೇಶಿಸುತ್ತಿದೆ ಎಂದು ಹೇಳಿದರು. “ಇಂದು ನಾವು ಭಾರತದ ಆರೋಗ್ಯ ಸೌಲಭ್ಯಗಳಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಸಾಮರ್ಥ್ಯವನ್ನು ಹೊಂದಿರುವ ಯೋಜನೆಯನ್ನು ಅನ್ನು ಪ್ರಾರಂಭಿಸುತ್ತಿದ್ದೇವೆ”, ಎಂದರು.
130 ಕೋಟಿ ಆಧಾರ್ ಸಂಖ್ಯೆಗಳು, 118 ಕೋಟಿ ಮೊಬೈಲ್ ಚಂದಾದಾರರು, ಸುಮಾರು 80 ಕೋಟಿ ಇಂಟರ್ನೆಟ್ ಬಳಕೆದಾರರು, ಸುಮಾರು 43 ಕೋಟಿ ʻಜನ್ ಧನ್ʼ ಬ್ಯಾಂಕ್ ಖಾತೆಗಳೊಂದಿಗೆ ಭಾರತವು ಜಗತ್ತಿನಲ್ಲಿ ಎಲ್ಲಿಯೂ ಇಲ್ಲದ ಅತಿದೊಡ್ಡ ಸಂಪರ್ಕಿತ ಮೂಲಸೌಕರ್ಯವನ್ನು ಹೊಂದಿದೆ ಎಂಬ ಅಂಶವನ್ನು ಪ್ರಧಾನಿ ಒತ್ತಿ ಹೇಳಿದರು. ಈ ಡಿಜಿಟಲ್ ಮೂಲಸೌಕರ್ಯವು ಪಡಿತರದಿಂದ ಆಡಳಿತದವರೆಗೂ ಸಾಮಾನ್ಯ ಭಾರತೀಯನಿಗೆ ಎಲ್ಲವನ್ನೂ ವೇಗವಾಗಿ ಮತ್ತು ಪಾರದರ್ಶಕ ರೀತಿಯಲ್ಲಿ ಒದಗಿಸುತ್ತಿದೆ. “ಇಂದು ಆಡಳಿತ ಸುಧಾರಣೆಗಳಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿರುವ ರೀತಿಯು ಅಭೂತಪೂರ್ವವಾಗಿದೆ”, ಎಂದು ಪ್ರಧಾನಿ ಹೇಳಿದರು.
ʻಆರೋಗ್ಯ ಸೇತು ಆ್ಯಪ್ʼ ಕೊರೊನಾ ಸೋಂಕು ಹರಡುವಿಕೆ ತಡೆಯಲು ಸಾಕಷ್ಟು ಸಹಾಯ ಮಾಡಿದೆ ಎಂದು ಪ್ರಧಾನಿ ಹೇಳಿದರು. ಉಚಿತ ಲಸಿಕೆ ಅಭಿಯಾನದಅಡಿಯಲ್ಲಿ ಭಾರತವು ಇಂದು ಸುಮಾರು 90 ಕೋಟಿ ಡೋಸ್ ಲಸಿಕೆ ನೀಡಿಕೆಯ ದಾಖಲೆ ನಿರ್ಮಿಸಲು ʻಕೋ-ವಿನ್ʼ ವಹಿಸಿದ ಪಾತ್ರವನ್ನು ಅವರು ಶ್ಲಾಘಿಸಿದರು.
ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆಯ ವಿಷಯದ ಬಗ್ಗೆ ಮಾತು ಮುಂದುವರಿಸಿದ ಪ್ರಧಾನಿ, ಕೊರೊನಾ ಅವಧಿಯಲ್ಲಿ ಟೆಲಿಮೆಡಿಸಿನ್ ವ್ಯವಸ್ಥೆಯೂ ಅಭೂತಪೂರ್ವವಾಗಿ ವಿಸ್ತರಣೆ ಕಂಡಿದೆ. ʻಇ-ಸಂಜೀವನಿʼ ಮೂಲಕ ಇಲ್ಲಿಯವರೆಗೆ ಸುಮಾರು 125 ಕೋಟಿ, ʻಟೆಲಿ ಮೆಡಿಸಿನ್ʼ ಸಂದರ್ಶನಗಳನ್ನು (ದೂರ ಸಮಾಲೋಚನೆ) ಪೂರ್ಣಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಈ ಸೌಲಭ್ಯವು ಪ್ರತಿದಿನ ದೇಶದ ದೂರ ಭಾಗಗಳಲ್ಲಿ ವಾಸಿಸುವ ಸಾವಿರಾರು ದೇಶವಾಸಿಗಳಿಗೆ ಮನೆಯಲ್ಲೇ ಕುಳಿತು ನಗರಗಳ ದೊಡ್ಡ ಆಸ್ಪತ್ರೆಗಳ ವೈದ್ಯರನ್ನು ಸಂಪರ್ಕಿಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ಹೇಳಿದರು.
ʻಆಯುಷ್ಮಾನ್ ಭಾರತ್ ಯೋಜನೆ (ಪಿಎಂಜೆಎವೈ) ಬಡವರ ಜೀವನದಲ್ಲಿ ದೊಡ್ಡ ತಲೆನೋವನ್ನು ಪರಿಹರಿಸಿದೆ ಎಂದು ಪ್ರಧಾನಿ ಹೇಳಿದರು. ಇಲ್ಲಿಯವರೆಗೆ 2 ಕೋಟಿಗೂ ಹೆಚ್ಚು ದೇಶವಾಸಿಗಳು ಈ ಯೋಜನೆಯಡಿ ಉಚಿತ ಚಿಕಿತ್ಸೆಯ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ, ಅವರಲ್ಲಿ ಅರ್ಧದಷ್ಟು ಮಹಿಳೆಯರು. ಕುಟುಂಬಗಳನ್ನು ಬಡತನದ ವಿಷವರ್ತುಲಕ್ಕೆ ತಳ್ಳುವ ಪ್ರಮುಖ ಕಾರಣಗಳಲ್ಲಿ ಅನಾರೋಗ್ಯವೂ ಒಂದಾಗಿದೆ. ಕುಟುಂಬಗಳ ಮಹಿಳೆಯರು ಸದಾ ತಮ್ಮ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದರಿಂದ ಹೆಚ್ಚು ಬಳಲುತ್ತಿದ್ದಾರೆ ಎಂದು ಪ್ರಧಾನಿ ಒತ್ತಿ ಹೇಳಿದರು. ಆಯುಷ್ಮಾನ್ ಯೋಜನೆಯ ಕೆಲವು ಫಲಾನುಭವಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಲು ನಾನು ನಿರ್ಧರಿಸಿದೆ ಮತ್ತು ಅವರೊಂದಿಗೆ ಸಂವಾದದ ವೇಳೆ ಯೋಜನೆಯ ಪ್ರಯೋಜನಗಳು ತಮ್ಮ ಅನುಭವಕ್ಕೂ ಬಂದವು ಎಂದು ಶ್ರೀ ಮೋದಿ ಹೇಳಿದರು. “ಈ ಆರೋಗ್ಯ ಸೇವೆ ಪರಿಹಾರಗಳು ದೇಶದ ವರ್ತಮಾನ ಮತ್ತು ಭವಿಷ್ಯದಲ್ಲಿ ದೊಡ್ಡ ಹೂಡಿಕೆಯಾಗಿವೆ” ಎಂದು ಅವರು ಹೇಳಿದರು.
ʻಆಯುಷ್ಮಾನ್ ಭಾರತ್ – ಡಿಜಿಟಲ್ ಮಿಷನ್ʼ ಯೋಜನೆಯು ಈಗ ದೇಶಾದ್ಯಂತ ಆಸ್ಪತ್ರೆಗಳ ಡಿಜಿಟಲ್ ಆರೋಗ್ಯ ಪರಿಹಾರಗಳನ್ನು ಪರಸ್ಪರ ಸಂಪರ್ಕಿಸಲಿದೆ ಎಂದು ಪ್ರಧಾನಿ ಹೇಳಿದರು. ಈ ಯೋಜನೆಯು ಆಸ್ಪತ್ರೆಗಳ ಪ್ರಕ್ರಿಯೆಗಳನ್ನು ಸರಳಗೊಳಿಸುವುದಲ್ಲದೆ, ಜೀವನದ ಸುಗಮತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು. ಇದರ ಅಡಿಯಲ್ಲಿ, ಪ್ರತಿಯೊಬ್ಬ ನಾಗರಿಕರೂ ಈಗ ʻಡಿಜಿಟಲ್ ಆರೋಗ್ಯ ಗುರುತಿನ ಚೀಟಿʼಯನ್ನು ಪಡೆಯುತ್ತಾರೆ ಮತ್ತು ಅವರ ಆರೋಗ್ಯ ದಾಖಲೆಯನ್ನು ಡಿಜಿಟಲ್ ಆಗಿ ಸಂರಕ್ಷಿಸಲಾಗುತ್ತದೆ ಎಂದರು.
ಭಾರತವು ಸಮಗ್ರ ಮತ್ತು ಎಲ್ಲರನ್ನೂ ಒಳಗೊಂಡ ಮಾದರಿಯ ಆರೋಗ್ಯಸೇವೆ ವ್ಯವಸ್ಥೆಗಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಮಾಹಿತಿ ನೀಡಿದರು. ರೋಗ ತಡೆಗೆ ಹಾಗೂ ಒಂದು ವೇಳೆ ಅನಾರೋಗ್ಯ ಉಂಟಾದ ಸಂದರ್ಭದಲ್ಲಿ ಸುಲಭ, ಕೈಗೆಟುಕುವ ದರದ ಮತ್ತು ಎಲ್ಲರಿಗೂ ಲಭ್ಯವಾಗುವಂತಹ ಚಿಕಿತ್ಸೆಗೆ ಈ ವ್ಯವಸ್ಥೆ ಒತ್ತು ನೀಡುತ್ತದೆ ಎಂದರು. ಆರೋಗ್ಯ ಶಿಕ್ಷಣದಲ್ಲಿ ಅಭೂತಪೂರ್ವ ಸುಧಾರಣೆಗಳ ಬಗ್ಗೆಯೂ ಚರ್ಚಿಸಿದ ಅವರು, 7-8 ವರ್ಷಗಳ ಹಿಂದಿನ ಅವಧಿಗೆ ಹೋಲಿಸಿದರೆ ಈಗ ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ವೈದ್ಯರು ಮತ್ತು ಅರೆ ವೈದ್ಯಕೀಯ ಮಾನವ ಸಂಪನ್ಮೂಲವನ್ನು ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ದೇಶದಲ್ಲಿ ʻಏಮ್ಸ್ʼ ಮತ್ತು ಇತರ ಆಧುನಿಕ ಆರೋಗ್ಯ ಸಂಸ್ಥೆಗಳ ಸಮಗ್ರ ಜಾಲವನ್ನು ಸ್ಥಾಪಿಸಲಾಗುತ್ತಿದೆ. ಪ್ರತಿ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಒಂದು ವೈದ್ಯಕೀಯ ಕಾಲೇಜು ಸ್ಥಾಪಿಸುವ ಕೆಲಸ ನಡೆಯುತ್ತಿದೆ ಎಂದರು. ಹಳ್ಳಿಗಳಲ್ಲಿ ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವ ಬಗ್ಗೆಯೂ ಮಾತನಾಡಿದ ಅವರು, ಹಳ್ಳಿಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಜಾಲಗಳು ಮತ್ತು ಕ್ಷೇಮ ಕೇಂದ್ರಗಳನ್ನು ಬಲಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಇಂತಹ 80 ಸಾವಿರಕ್ಕೂ ಹೆಚ್ಚು ಕೇಂದ್ರಗಳು ಈಗಾಗಲೇ ಕಾರ್ಯಾರಂಭ ಮಾಡಿವೆ ಎಂದು ಪ್ರಧಾನಿ ತಿಳಿಸಿದರು.
ವಿಶ್ವ ಪ್ರವಾಸೋದ್ಯಮ ದಿನದಂದು ಇಂದಿನ ಕಾರ್ಯಕ್ರಮವನ್ನು ಆಯೋಜಿರುವ ಬಗ್ಗೆ ಗಮನ ಸೆಳೆದ ಪ್ರಧಾನಮಂತ್ರಿಯವರು, ಆರೋಗ್ಯವು ಪ್ರವಾಸೋದ್ಯಮದೊಂದಿಗೆ ಬಹಳ ನಿಕಟ ಸಂಬಂಧವನ್ನು ಹೊಂದಿದೆ. ಏಕೆಂದರೆ ನಮ್ಮ ಆರೋಗ್ಯ ಮೂಲಸೌಕರ್ಯವನ್ನು ಸಂಯೋಜಿಸಿದಾಗ, ಬಲಪಡಿಸಿದಾಗ, ಅದು ಪ್ರವಾಸೋದ್ಯಮ ವಲಯದ ಸುಧಾರಣೆಗೂ ಕಾರಣವಾಗುತ್ತದೆ ಎಂದು ಹೇಳಿದರು.
***
Speaking at the launch of Ayushman Bharat Digital Mission. https://t.co/OjfHVbQdT7
— Narendra Modi (@narendramodi) September 27, 2021
बीते सात वर्षों में, देश की स्वास्थ्य सुविधाओं को मजबूत करने का जो अभियान चल रहा है, वो आज से एक नए चरण में प्रवेश कर रहा है।
— PMO India (@PMOIndia) September 27, 2021
आज एक ऐसे मिशन की शुरुआत हो रही है, जिसमें भारत की स्वास्थ्य सुविधाओं में क्रांतिकारी परिवर्तन लाने की ताकत है: PM @narendramodi
130 करोड़ आधार नंबर, 118 करोड़ mobile subscribers, लगभग 80 करोड़ internet user, करीब 43 करोड़ जनधन बैंक खाते इतना बड़ा connected infrastructure दुनिया में कहीं नही है।
— PMO India (@PMOIndia) September 27, 2021
ये digital infrastructure राशन से लेकर प्रशासन तक को तेज, पारदर्शी तरीके से सामान्य भारतीय तक पहुंचा रहा है: PM
आरोग्य सेतु ऐप से कोरोना संक्रमण को फैलने से रोकने में बहुत मदद मिली।
— PMO India (@PMOIndia) September 27, 2021
सबको वैक्सीन, मुफ्त वैक्सीन अभियान के तहत भारत आज करीब-करीब 90 करोड़ वैक्सीन डोज लगा पाया है तो इसमें Co-WIN का बहुत बड़ा रोल है: PM @narendramodi
कोरोना काल में टेलिमेडिसिन का भी अभूतपूर्व विस्तार हुआ है।
— PMO India (@PMOIndia) September 27, 2021
ई-संजीवनी के माध्यम से अब तक लगभग सवा करोड़ रिमोट कंसल्टेशन पूरे हो चुके हैं।
ये सुविधा हर रोज़ देश के दूर-सुदूर में रहने वाले हजारों देशवासियों को घर बैठे ही शहरों के बड़े अस्पतालों के डॉक्टरों से कनेक्ट कर रही है: PM
आयुष्मान भारत- PM JAY ने गरीब के जीवन की बहुत बड़ी चिंता दूर की है।
— PMO India (@PMOIndia) September 27, 2021
अभी तक 2 करोड़ से अधिक देशवासियों ने इस योजना के तहत मुफ्त इलाज की सुविधा का लाभ उठाया है।
इसमें भी आधी लाभार्थी, हमारी माताएं, बहनें, बेटियां हैं: PM @narendramodi
आयुष्मान भारत- डिजिटल मिशन, अब पूरे देश के अस्पतालों के डिजिटल हेल्थ सोल्यूशंस को एक दूसरे से कनेक्ट करेगा।
— PMO India (@PMOIndia) September 27, 2021
इसके तहत देशवासियों को अब एक डिजिटल हेल्थ आईडी मिलेगी।
हर नागरिक का हेल्थ रिकॉर्ड डिजिटली सुरक्षित रहेगा: PM @narendramodi
अब भारत में एक ऐसे हेल्थ मॉडल पर काम जारी है, जो होलिस्टिक हो, समावेशी हो।
— PMO India (@PMOIndia) September 27, 2021
एक ऐसा मॉडल, जिसमें बीमारियों से बचाव पर बल हो,- यानि प्रिवेंटिव हेल्थकेयर, बीमारी की स्थिति में इलाज सुलभ हो, सस्ता हो और सबकी पहुंच में हो: PM @narendramodi
भारत के हेल्थ सेक्टर को ट्रांसफॉर्म करने के लिए मेडिकल एजुकेशन में भी अभूतपूर्व रिफॉर्म्स हो रहे हैं।
— PMO India (@PMOIndia) September 27, 2021
7-8 साल में पहले की तुलना में आज अधिक डॉक्टर्स और पैरामेडिकल मैनपावर देश में तैयार हो रही है: PM @narendramodi
एक संयोग ये भी है कि आज का ये कार्यक्रम वर्ल्ड टूरिज्म डे पर आयोजित हो रहा है।
— PMO India (@PMOIndia) September 27, 2021
कुछ लोग सोच सकते हैं कि हेल्थ केयर के प्रोग्राम का टूरिज्म से क्या लेना देना? - PM @narendramodi
लेकिन हेल्थ का टूरिज्म के साथ एक बड़ा मजबूत रिश्ता है।
— PMO India (@PMOIndia) September 27, 2021
क्योंकि जब हमारा हेल्थ इंफ्रास्ट्रक्चर इंटीग्रेटेड होता है, मजबूत होता है, तो उसका प्रभाव टूरिज्म सेक्टर पर भी पड़ता है: PM @narendramodi