ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಅಕ್ಟೋಬರ್ 12ರಂದು ಬೆಳಗ್ಗೆ 11 ಗಂಟೆಗೆ 28ನೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಭಾಷಣ ಮಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರು ಮತ್ತು ಎನ್ಎಚ್ಆರ್ಸಿ ಅಧ್ಯಕ್ಷರು ಸಹ ಉಪಸ್ಥಿತರಿರುವರು.
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ಎಚ್ಆರ್ಸಿ) ಕುರಿತು
ಮಾನವ ಹಕ್ಕುಗಳ ಉತ್ತೇಜನ ಮತ್ತು ರಕ್ಷಣೆಗಾಗಿ 1993ರ ಅಕ್ಟೋಬರ್ 12ರಂದು ಮಾನವ ಹಕ್ಕುಗಳ ಸಂರಕ್ಷಣಾ ಕಾಯ್ದೆ 1993ರ ಅಡಿಯಲ್ಲಿ ʻಎನ್ಎಚ್ಆರ್ಸಿʼಯನ್ನು ಸ್ಥಾಪಿಸಲಾಯಿತು. ಆಯೋಗವು ಯಾವುದೇ ರೀತಿಯ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಗಮನ ಹರಿಸುತ್ತದೆ, ವಿಚಾರಣೆಗಳನ್ನು ನಡೆಸುತ್ತದೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಲ್ಲಿ, ಸಂತ್ರಸ್ತರಿಗೆ ಪರಿಹಾರವನ್ನು ಪಾವತಿಸಲು ಸಾರ್ವಜನಿಕ ಅಧಿಕಾರಿಗಳಿಗೆ ಶಿಫಾರಸು ಮಾಡುತ್ತದೆ. ತಪ್ಪೆಸಗಿದ ಸಾರ್ವಜನಿಕ ಸೇವಕರ ವಿರುದ್ಧ ಇತರ ಪರಿಹಾರಾತ್ಮಕ ಮತ್ತು ಕಾನೂನು ಕ್ರಮಗಳನ್ನು ಆಯೋಗ ಕೈಗೊಳ್ಳುತ್ತದೆ.
***