Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಪ್ರಿಲ್ 15ರಂದು ಭುಜ್‌ನಲ್ಲಿ ಕೆ.ಕೆ.ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಏಪ್ರಿಲ್ 15ರಂದು ಬೆಳಗ್ಗೆ 11 ಗಂಟೆಗೆ ಗುಜರಾತ್‌ನ ಭುಜ್ ನಲ್ಲಿರುವ ಕೆ.ಕೆ.ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಭುಜ್ ನ ʻಶ್ರೀ ಕುಚಿ ಲೇವಾ ಪಟೇಲ್ ಸಮಾಜ್ʼ ಈ ಆಸ್ಪತ್ರೆಯನ್ನು ನಿರ್ಮಿಸಿದೆ. 

ಇದು ಕಛ್‌ನ 200ಹಾಸಿಗೆಗಳ ಮೊದಲ ದತ್ತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿದೆ. ಇಂಟರ್ವೆನ್ಷನಲ್ ಕಾರ್ಡಿಯಾಲಜಿ (ಕ್ಯಾಥ್ಲ್ಯಾಬ್), ಕಾರ್ಡಿಯೋಥೊರಾಸಿಕ್ ಸರ್ಜರಿ, ರೇಡಿಯೇಷನ್ ಆಂಕಾಲಜಿ, ಮೆಡಿಕಲ್ ಆಂಕಾಲಜಿ, ಸರ್ಜಿಕಲ್ ಆಂಕಾಲಜಿ, ನೆಫ್ರಾಲಜಿ, ಯುರಾಲಜಿ, ನ್ಯೂಕ್ಲಿಯರ್ ಮೆಡಿಸಿನ್, ನ್ಯೂರೋ ಸರ್ಜರಿ, ಕೀಲು ಕಸಿ ಮುಂತಾದ ಸೂಪರ್ ಸ್ಪೆಷಾಲಿಟಿ ಸೇವೆಗಳ ಜೊತೆಗೆ  ಇತರ ಪೂರಕ ಸೇವೆಗಳಾದ ಪ್ರಯೋಗಾಲಯ, ರೇಡಿಯಾಲಜಿ ಮುಂತಾದ ಸೇವೆಗಳನ್ನೂ ಒದಗಿಸುತ್ತದೆ. ಈ ಆಸ್ಪತ್ರೆಯು ಈ ಪ್ರದೇಶದ ಜನರಿಗೆ ಆಧುನಿಕ ವೈದ್ಯಕೀಯ ಸೇವೆಗಳನ್ನು ಕೈಗೆಟುಕುವ ಬೆಲೆಯಲ್ಲಿ ಸುಲಭವಾಗಿ ಲಭ್ಯವಾಗುವಂತೆ ಮಾಡುತ್ತದೆ. 

******