Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾ ಪ್ರಧಾನಿ ಭೇಟಿ ಮಾಡಿದ ಪ್ರಧಾನಮಂತ್ರಿ.

ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾ ಪ್ರಧಾನಿ ಭೇಟಿ ಮಾಡಿದ ಪ್ರಧಾನಮಂತ್ರಿ.


ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರು ಜರ್ಮನಿಯ ಸ್ಕ್ಲೋಸ್ ಎಲ್ಮಾವ್ ನಲ್ಲಿ ನಡೆದ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ 2022ರ ಜೂನ್ 27ರಂದು ಕೆನಡಾದ ಪ್ರಧಾನಮಂತ್ರಿ ಗೌರವಾನ್ವಿತ ಜಸ್ಟಿನ್ ಟ್ರಡೋ ಅವರನ್ನು ಭೇಟಿ ಮಾಡಿದ್ದರು.

ಹಂಚಿಕೆ ಮೌಲ್ಯಗಳೊಂದಿಗೆ ದೃಢವಾದ ಪ್ರಜಾಪ್ರಭುತ್ವದ ನಾಯಕರಾಗಿರುವ ಅವರು, ಭಾರತ-ಕೆನಡಾ ದ್ವಿಪಕ್ಷೀಯ ಸಂಬಂಧಗಳ ಕುರಿತಂತೆ ಫಲಪ್ರದ ಮಾತುಕತೆ ನಡೆಸಿದರು. ವ್ಯಾಪಾರ ಮತ್ತು ಆರ್ಥಿಕ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು, ಭದ್ರತೆ ಮತ್ತು ಭಯೋತ್ಪಾದನೆ ನಿಗ್ರಹದಲ್ಲಿ ಸಹಕಾರ ಮತ್ತು ಜನರ ನಡುವಿನ ಸಂಬಂಧಗಳನ್ನು ಇನ್ನಷ್ಟು ಬಲವರ್ಧನೆಗೊಳಿಸಲು ಉಭಯ ನಾಯಕರು ಒಪ್ಪಿದರು.

ಅಲ್ಲದೆ, ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ಜಾಗತಿಕ ಹಾಗೂ ಪ್ರಾದೇಶಿಕ ವಿಷಯಗಳ ಕುರಿತು ವಿಚಾರ ವಿನಿಮಯ ನಡೆಸಿದರು. 

******