Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ವಾತಂತ್ರ್ಯ ಹೋರಾಟಗಾರರಾದ ಲೋಕಮಾನ್ಯ ತಿಲಕ್ ಮತ್ತು ಚಂದ್ರಶೇಖರ್ ಆಜಾದ್ ಅವರ ಜನ್ಮದಿನದಂದು ಗೌರವ ಸಲ್ಲಿಸಿದ ಪ್ರಧಾನಮಂತ್ರಿ


ಸ್ವಾತಂತ್ರ್ಯ ಹೋರಾಟಗಾರರಾದ ಲೋಕಮಾನ್ಯ ತಿಲಕ್ ಮತ್ತು ಚಂದ್ರಶೇಖರ್ ಆಜಾದ್ ಅವರ ಜನ್ಮದಿನದಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ಕೆಲವು ವರ್ಷಗಳ ಹಿಂದೆ ಮನ್ ಕಿ ಬಾತ್ ನಲ್ಲಿ ಲೋಕಮಾನ್ಯ ತಿಲಕ್ ಮತ್ತು ಚಂದ್ರಶೇಖರ್ ಆಜಾದ್ ಅವರ ಬಗ್ಗೆ ಮಾತನಾಡಿದ ಆಯ್ದ ಭಾಗವನ್ನು ಹಂಚಿಕೊಂಡಿದ್ದಾರೆ. ಅವರು ಮುಂಬೈಗೆ ಪ್ರವಾಸ ಸಂದರ್ಭದಲ್ಲಿ ಲೋಕಮಾನ್ಯ ಸೇವಾ ಸಂಘಕ್ಕೆ ಭೇಟಿ ನೀಡಿದ್ದು, ಈ ಕುರಿತಾದ ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ.

 

ಈ ಕುರಿತು ಪ್ರಧಾನಮಂತ್ರಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ

 

“ಭಾರತ ಮಾತೆಯ ಇಬ್ಬರು ಶ್ರೇಷ್ಠ ಪುತ್ರರಾದ ಲೋಕಮಾನ್ಯ ತಿಲಕ್ ಮತ್ತು ಚಂದ್ರಶೇಖರ್ ಆಜಾದ್ ಅವರ ಜನ್ಮ ದಿನದಂದು ಅವರಿಗೆ ನಮಿಸುತ್ತೇನೆ. ಈ ಇಬ್ಬರು ಧೀಮಂತರು ಧೈರ್ಯ ಮತ್ತು ದೇಶ ಭಕ್ತಿಯನ್ನು ಸಾರುತ್ತಾರೆ. ಕೆಲ ವರ್ಷಗಳ ಹಿಂದೆ #ಮನ್ ಕಿ ಬಾತ್ ನಲ್ಲಿ ಅವರ ಬಗ್ಗೆ ಮಾತನಾಡಿದ್ದನ್ನು ಹಂಚಿಕೊಳ್ಳುತ್ತಿದ್ದೇನೆ.

 

ಲೋಕಮಾನ್ಯ ತಿಲಕ್ ಅವರ ಶಾಶ್ವತ ಪರಂಪರೆಗಳಲ್ಲಿ ಒಂದಾದ ದೊಡ್ಡ ಪ್ರಮಾಣದ ಗಣೇಶ ಉತ್ಸವಗಳು ಜನರಲ್ಲಿ ಸಾಂಸ್ಕೃತಿಕ ಪ್ರಜ್ಞೆಯನ್ನು ಬೆಳೆಸಿತು. ಮುಂಬೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಲೋಕಮಾನ್ಯ ತಿಲಕ್ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದ ಲೋಕಮಾನ್ಯ ಸೇವಾ ಸಂಘಕ್ಕೆ ಭೇಟಿ ನೀಡಿದ್ದಾಗಿ ಪ್ರಧಾನಮಂತ್ರಿ ಹೇಳಿದ್ದಾರೆ.

 

**********