Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬರ್ಮಿಂಗ್ ಹ್ಯಾಮ್ ಕಾಮನ್ ವೆಲ್ತ್ ಕ್ರೀಡಾಕೂಟ – 2022 ಬೆಳ್ಳಿ ಪದಕ ಗೆದ್ದ ಜೂಡೋ ಆಟಗಾರ್ತಿ ತುಲಿಕಾ ಮಾನ್ ಅವರನ್ನು ಅಭಿನಂದಿಸಿದ ಪ್ರಧಾನಿ ಮೋದಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬರ್ಮಿಂಗ್ ಹ್ಯಾಮ್ ಕಾಮನ್ ವೆಲ್ಟ್ ಕ್ರೀಡಾಕೂಟ-2022ರಲ್ಲಿ ಬೆಳ್ಳಿ ಪದಕ ಗೆದ್ದ ಜೂಡೋ ಆಟಗಾರ್ತಿ ತುಲಿಕಾ ಮಾನ್ ಅವರನ್ನು ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ;

“ತುಲಿಕಾ ಮಾನ್ ಅವರು ಬರ್ಮಿಂಗ್ ಹ್ಯಾಮ್ ಕ್ರೀಡಾಕೂಟದಲ್ಲಿ ಅಮೋಘ ಪ್ರದರ್ಶನ ನೀಡಿ ಮಿಂಚಿದ್ದಾರೆ! ಜೂಡೋದಲ್ಲಿ ಬೆಳ್ಳಿ ಪದಕ ಗೆದ್ದಿರುವ ಮಾನ್ ಅವರಿಗೆ ಅಭಿನಂದನೆಗಳು. ಈ ಪದಕವು ಅವರ ವಿಶಿಷ್ಟ ಕ್ರೀಡಾ ವೃತ್ತಿಜೀವನದಲ್ಲಿ ಮತ್ತೊಂದು ಪುರಸ್ಕಾರವಾಗಿದೆ. ಅವರ ಮುಂಬರುವ ಎಲ್ಲಾ ಕ್ರೀಡಾ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

 

 

********