Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಒಡಿಶಾದ ಝರ್ಸುಗುಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಝರ್ಸುಗುಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರಧಾನ ಮಂತ್ರಿಗಳ ಕಾರ್ಯಾಲಯ ಹೀಗೆ ಟ್ವೀಟ್‌ ಮಾಡಿದೆ:

“ಒಡಿಶಾದ ಝರ್ಸುಗುಡಾದಲ್ಲಿ ಸಂಭವಿಸಿದ ಅಪಘಾತವು ಅತ್ಯಂತ ದುಃಖ ತಂದಿದೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳೊಂದಿಗೆ ನನ್ನ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ: ಪ್ರಧಾನಿ

 

*****