Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಮಾಜವಾದಿ ಪಕ್ಷದ ಧುರೀಣ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಪ್ರಧಾನ ಮಂತ್ರಿ ಶೋಕ


ಹಿರಿಯ ರಾಜಕಾರಣಿ, ಸಮಾಜವಾದಿ ಪಕ್ಷದ ಧುರೀಣ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರದ ಮಾಜಿ ಸಚಿವ ಶ್ರೀ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಶ್ರೀ ಯಾದವ್ ಅವರು ಅಪಾರ ಶ್ರದ್ಧೆ ಮತ್ತು ಕಾಳಜಿಯಿಂದ ದೇಶದ ಜನತಗೆ ಸೇವೆ ಸಲ್ಲಿಸಿದ್ದರು. ಲೋಕನಾಯಕ ಜಯಪ್ರಕಾಶ್ ನಾರಾಯಣ್ ಮತ್ತು ಡಾ. ಮನೋಹರ್ ಲೋಹಿಯಾ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಪ್ರಧಾನ ಮಂತ್ರಿ ಸ್ಮರಿಸಿದ್ದಾರೆ. ಶ್ರೀ ಯಾದವ್ ಅವರು ರಕ್ಷಣಾ ಸಚಿವರಾಗಿದ್ದಾಗ ಬಲಿಷ್ಠ ಭಾರತ ಕಟ್ಟಲು ಅಪಾರ ಶ್ರಮಿಸಿದ್ದರು ಎಂದು ಮೋದಿ ಸ್ಮರಿಸಿದ್ದಾರೆ. ಶ್ರೀ ಯಾದವ್ ಅವರೊಂದಿಗಿನ ನಿಕಟ ಒಡನಾಟವನ್ನು ಸ್ಮರಿಸಿದ ಪ್ರಧಾನ ಮಂತ್ರಿ,  ಯಾದವ್ ಅವರ ಅಭಿಪ್ರಾಯಗಳನ್ನು ಕೇಳಲು ನಾನು ಯಾವಾಗಲೂ ಎದುರು ನೋಡುತ್ತಿದ್ದೆ, ನಮ್ಮಿಬ್ಬರ ಭೇಟಿಗಳ ಛಾಯಾಚಿತ್ರಗಳನ್ನು ಸಹ ಹಂಚಿಕೊಂಡಿದ್ದೇನೆ. ಶ್ರೀ ಯಾದವ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ;

“ಶ್ರೀ ಮುಲಾಯಂ ಸಿಂಗ್ ಯಾದವ್ ಜಿ ಅವರದು ಗಮನಾರ್ಹ ವ್ಯಕ್ತಿತ್ವ. ಜನರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲರಾಗಿದ್ದ ಅವರು, ವಿನಮ್ರ ಮತ್ತು ಈ ನೆಲದ ನಾಯಕರಾಗಿ ವ್ಯಾಪಕ ಪ್ರಶಂಸಗೆ ಪಾತ್ರರಾಗಿದ್ದರು.  ಅವರು ಶ್ರದ್ಧೆಯಿಂದ ಜನರಿಗೆ ಸೇವೆ ಸಲ್ಲಿಸಿದ್ದರು. ಲೋಕನಾಯಕ ಜಯಪ್ರಕಾಶ್ ನಾರಾಯಣ್ ಮತ್ತು ಡಾ. ಮನೋಹರ್ ಲೋಹಿಯಾ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ತಮ್ಮ ಜೀವನವನ್ನೇ  ಮುಡಿಪಾಗಿಟ್ಟಿದ್ದರು.”

“ಮುಲಾಯಂ ಸಿಂಗ್ ಯಾದವ್ ಅವರು ಉತ್ತರ ಪ್ರದೇಶ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಅಪಾರ ಗುರುತಿಸಿಕೊಂಡಿದ್ದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಪ್ರಮುಖ ಸೈನಿಕರಂತೆ ಕೆಲಸ ಮಾಡಿದ್ದರು. ರಕ್ಷಣಾ ಸಚಿವರಾಗಿ ಅವರು ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಶ್ರಮಿಸಿದ್ದರು. ಅವರ ಸಂಸದೀಯ ಹೋರಾಟಗಳು ಒಳನೋಟವುಳ್ಳದ್ದಾಗಿದ್ದವು. ಅವು ರಾಷ್ಟ್ರೀಯ ಹಿತಾಸಕ್ತಿಗಳನ್ನು ಹೆಚ್ಚಿಸಲು ಒತ್ತು ನೀಡಿತ್ತು ಎಂದು ಪ್ರಧಾನ ಮಂತ್ರಿ ಬಣ್ಣಿಸಿದ್ದಾರೆ. ”

“ಅವರು ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾಗ ನಾನು ಮುಲಾಯಂ ಸಿಂಗ್ ಯಾದವ್ ಜಿ ಅವರೊಂದಿಗೆ ಅನೇಕ ಬಾರಿ ಮಾತುಕತೆ ನಡೆಸಿದ್ದೇನೆ. ಆ ನಿಕಟ ಒಡನಾಟ ಮುಂದುವರಿದಿತ್ತು. ನಾನು ಯಾವಾಗಲೂ ಅವರ ಅಭಿಪ್ರಾಯ, ಸಲಹೆ, ಸೂಚನೆಗಳನ್ನು ಕೇಳಲು ಎದುರು ನೋಡುತ್ತಿದ್ದೆ. ಅವರ ನಿಧನ ನನಗೆ ತುಂಬಲಾರದ ನೋವು ತಂದಿದೆ. ಅವರ ಕುಟುಂಬಕ್ಕೆ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿರುವ ಲಕ್ಷಾಂತರ ಅಪಾರ ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ”

 

*****