Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಗುರು ತೇಗ್ ಬಹಾದೂರ್ ಜೀ ಅವರ ಹುತಾತ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ಗುರು ತೇಗ್ ಬಹಾದೂರ್ ಜೀ ಅವರ ಹುತಾತ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ.

” ಶ್ರೀ ಗುರು ತೇಗ್ ಬಹಾದೂರ್ ಜೀ ಅವರು ಹುತಾತ್ಮರಾದ ದಿನದಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರ ಧೈರ್ಯ ಮತ್ತು ಅವರ ತತ್ವಗಳು ಮತ್ತು ಆದರ್ಶಗಳ ಬಗ್ಗೆ ಅಚಲವಾದ ಬದ್ಧತೆಗಾಗಿ ಅವರು ಸಾರ್ವತ್ರಿಕವಾಗಿ ಪ್ರಶಂಸಿಸಲ್ಪಡುತ್ತಾರೆ. ದಬ್ಬಾಳಿಕೆ ಮತ್ತು ಅನ್ಯಾಯಕ್ಕೆ ತಲೆಬಾಗಲು ಅವರು ನಿರಾಕರಿಸಿದ್ದರು. ಅವರ ಬೋಧನೆಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇವೆ,” ಎಂದು ಹೇಳಿದ್ದಾರೆ.

****