Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಂಭವಿಸಿದ ಅವಘಡದಿಂದಾದ ಪ್ರಾಣಹಾನಿಗಳಿಗೆ ಪ್ರಧಾನಮಂತ್ರಿಯವರು ಸಂತಾಪ ಸೂಚಿಸಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಸಂಭವಿಸಿದ  ಅವಘಡದಿಂದಾದ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 

ಪ್ರಧಾನಮಂತ್ರಿಯವರು ಅವಘಡದಲ್ಲಿ ಮೃತರಾದ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್‌) 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿಯವರ ಕಚೇರಿಯ ಟ್ವೀಟ್  ಹೀಗಿದೆ:

“ಎಪಿಯ ನೆಲ್ಲೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ನಡೆದ ದುರ್ಘಟನೆಯಿಂದ ನೋವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಮೃತರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ ನಿಧಿಯಿಂದ  2 ಲಕ್ಷ ರೂಪಾಯಿಗಳ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ನೀಡಲಾಗುವುದು: ಪ್ರಧಾನಮಂತ್ರಿ ನರೇಂದ್ರ ಮೋದಿ

 

*****