Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಮನ್ನತ್ತು ಪದ್ಮನಾಭನ್‌ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಮನ್ನತ್ತು ಪದ್ಮನಾಭನ್‌ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸಾಮಾಜಿಕ ಸುಧಾರಣೆಗಳು, ಗ್ರಾಮೀಣಾಭಿವೃದ್ಧಿ ಮತ್ತು ಭಾರತದ ಸ್ವಾತಂತ್ರ್ಯ ಚಳವಳಿಗೆ ಅವರು ನೀಡಿದ ಕೊಡುಗೆಗಳನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು.

ಈ ಸಂಬಂಧ ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿ;  

‘‘ಮನ್ನತ್ತು ಪದ್ಮನಾಭನ್‌ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಸಮಾಜ ಸುಧಾರಣೆಗೆ ಅವರ ಕೊಡುಗೆ ಮತ್ತು ಅವರ ಸೇವೆ ಹಲವಾರು ಜನರನ್ನು ಪ್ರೇರೇಪಿಸುತ್ತದೆ. ಗ್ರಾಮೀಣಾಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವ ಅವರ ಪ್ರಯತ್ನಗಳಿಗಾಗಿ ಅವರು ವ್ಯಾಪಕವಾಗಿ ಗೌರವಿಸಲ್ಪಟ್ಟರು ಮತ್ತು ಭಾರತದ ಸ್ವಾತಂತ್ರ್ಯ ಚಳವಳಿಗೆ ದೊಡ್ಡ ಕೊಡುಗೆ ನೀಡಿದರು.’’ ಎಂದಿದ್ದಾರೆ.

*****