Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಐಸಿಸಿ ಅಂಡರ್ 19 ಟಿ20 ವಿಶ್ವಕಪ್ ಗೆದ್ದ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಧಾನ ಮಂತ್ರಿ  ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಐಸಿಸಿ ಅಂಡರ್ 19 ಟಿ20 ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ.

ಬಿಸಿಸಿಐ ಮಹಿಳೆಯರ ಟ್ವೀಟ್ ಅನ್ನು ಉಲ್ಲೇಖಿಸಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.ಅದರಲ್ಲಿ ಅವರು 

“ಐಸಿಸಿ ಅಂಡರ್ 19 ಟಿ 20 ವಿಶ್ವಕಪ್ ನಲ್ಲಿ ವಿಶೇಷ ಗೆಲುವು ಸಾಧಿಸಿದುದಕ್ಕಾಗಿ  ಭಾರತೀಯ ತಂಡಕ್ಕೆ ಅಭಿನಂದನೆಗಳು. ಅವರು ಅತ್ಯುತ್ತಮ ಕ್ರಿಕೆಟ್ ಆಡಿದ್ದಾರೆ ಮತ್ತು ಅವರ ಯಶಸ್ಸು ಮುಂಬರುವ ಹಲವು ಕ್ರಿಕೆಟಿಗರಿಗೆ ಸ್ಫೂರ್ತಿ ನೀಡುತ್ತದೆ. ತಂಡದ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು” ಎಂದಿದ್ದಾರೆ.

*****