Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ತರ ಪ್ರದೇಶ ಇಟಾವಾದಲ್ಲಿ ಸ್ವನಿಧಿ ಮಹೋತ್ಸವವನ್ನು ಶ್ಲಾಘಿಸಿದ ಪ್ರಧಾನಿ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದ ಸ್ವನಿಧಿ ಮಹೋತ್ಸವವನ್ನು ಶ್ಲಾಘಿಸಿದ್ದಾರೆ. ಅಲ್ಲಿ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯ ಫಲಾನುಭವಿಗಳಿಗೆ ಗರಿಷ್ಠ ಸಾಲ ವಿತರಣೆ ಮತ್ತು ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸಲು ನೀಡಿದ ಅತ್ಯುತ್ತಮ ಕೊಡುಗೆಗಾಗಿ ಕಾರ್ಯಕ್ರಮದ ವೇಳೆ ಗೌರವಿಸಲಾಯಿತು. 

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಇಟಾವಾ ಅವರ ಈ ಉಪಕ್ರಮವು ಅತ್ಯಂತ ಶ್ಲಾಘನೀಯವಾಗಿದೆ..! ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವುದರ ಜೊತೆಗೆ, ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಗೆ ವ್ಯಾಪಕವಾಗಿ ಕೊಡುಗೆ ನೀಡಿದವರನ್ನು ಗೌರವಿಸಲು ಇಂತಹ ಕಾರ್ಯಕ್ರಮಗಳು ಮಾಧ್ಯಮವಾಗುತ್ತಿವೆ.”

***