Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಷ್ಯಾ ಅಧ್ಯಕ್ಷ ಪುಟಿನ್ ಜತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೂರವಾಣಿ ಮಾತುಕತೆ


ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾ ಅಧ್ಯಕ್ಷ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಹಕಾರದ ಪ್ರಗತಿ ಪರಿಶೀಲಿಸಿದ ಉಭಯ ನಾಯಕರು, ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ರಷ್ಯಾದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಕುರಿತು ಅಧ್ಯಕ್ಷ ಪುಟಿನ್ ಅವರು ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಿದರು.

ಉಕ್ರೇನ್‌ ಪರಿಸ್ಥಿತಿ ಕುರಿತು ಚರ್ಚಿಸುವಾಗ, ಪ್ರಧಾನ ಮಂತ್ರಿ ಮೋದಿ ಅವರು ಸಂಧಾನ ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಪುಟಿನ್ ಅವರಿಗೆ ಸಲಹೆ ನೀಡಿದರು.

ನಿರಂತರ ಸಂಪರ್ಕ ಸಾಧಿಸಲು ಇಬ್ಬರೂ ನಾಯಕರು ಒಪ್ಪಿಗೆ ಸೂಚಿಸಿದರು. ಉಭಯ ದೇಶಗಳ ನಡುವಿನ ವಿಶೇಷ ಕಾರ್ಯತಂತ್ರ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಇರುವ ಪ್ರಯತ್ನಗಳನ್ನು ಮುಂದುವರಿಸಲು ಒಪ್ಪಿಗೆ ಸೂಚಿಸಿದರು.

 

***