Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಫ್ರಾನ್ಸ್ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

ಫ್ರಾನ್ಸ್ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು


ಫ್ರಾನ್ಸ್ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಶ್ರೀ ಇಮ್ಯಾನುಯೆಲ್ ಬೊನ್ನೆ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ  ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರ ಮುಂಬರುವ ಫ್ರಾನ್ಸ್ ಭೇಟಿಯ ಸಂದರ್ಭದಲ್ಲಿ ದ್ವಿಪಕ್ಷೀಯ ಸಹಕಾರದ ವಿವಿಧ ಕ್ಷೇತ್ರಗಳಲ್ಲಿನ ಒಪ್ಪಂದಗಳ ಪ್ರಗತಿಯ ಕುರಿತು ಪ್ರಧಾನಮಂತ್ರಿಯವರಿಗೆ ಶ್ರೀ ಬೊನ್ನೆ ಅವರು ವಿವರಿಸಿದರು.

ಜುಲೈ 14 ರಂದು ಗೌರವಾನ್ವಿತ ಅತಿಥಿಯಾಗಿ ಬಾಸ್ಟಿಲ್ ಡೇ ಆಚರಣೆಯಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದಕ್ಕಾಗಿ ಅಧ್ಯಕ್ಷ ಶ್ರೀ ಮ್ಯಾಕ್ರನ್ ಅವರಿಗೆ ಪ್ರಧಾನಮಂತ್ರಿ ಅವರು ತಮ್ಮ ಕೃತಜ್ಞತೆಯನ್ನು ತಿಳಿಸಿದರು.

ಹಿರೋಷಿಮಾದಲ್ಲಿ ಅಧ್ಯಕ್ಷ ಶ್ರೀ  ಮ್ಯಾಕ್ರನ್ ಅವರೊಂದಿಗಿನ ಇತ್ತೀಚಿನ ಭೇಟಿಯನ್ನು ನೆನಪಿಸಿಕೊಂಡ ಪ್ರಧಾನಮಂತ್ರಿಯವರು, ಮುಂಬರುವ ದಿನಗಳಲ್ಲಿ ಪ್ಯಾರಿನ್ಸ್ ನಲ್ಲಿ ನಡೆಯಲಿರುವ ಅವರ ಭೇಟಿಯು ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುಂದುವರಿಸಲು ಹಾಗೂ ಮತ್ತಷ್ಟು ಬಲಪಡಿಸುಲು ನಾನು ಎದುರು ನೋಡುತ್ತಿದ್ದೇನೆ ಎಂದು  ಹೇಳಿದರು.

****