Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಾ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮದಿನದಂದು ಪ್ರಧಾನಮಂತ್ರಿ ಗೌರವ ಸಲ್ಲಿಕೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮದಿನದಂದು ಗೌರವ ಸಲ್ಲಿಸಿದ್ದಾರೆ.

ಈ ಸಂಬಂಧ ಪ್ರಧಾನಿ ಶ್ರೀ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂದೇಶ ನೀಡಿದ್ದಾರೆ.

“ಮಹಾನ್ ರಾಷ್ಟ್ರವಾದಿ ಚಿಂತಕ, ಶಿಕ್ಷಣ ಮತ್ತು ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮದಿನದಂದು ಶತ ಶತ ನಮನಗಳು. ಒಂದು ಸಶಕ್ತ ಭಾರತವರ್ಷದ ನಿರ್ಮಾಣಕ್ಕಾಗಿ ಜೀವನ ಸಮರ್ಪಿಸಿರುವ ಮಹಾನ್ ಚೇತನ. ಅವರ ಜೀವನ, ಆದರ್ಶ ಮತ್ತು ಸಿದ್ದಾಂತ ದೇಶದ ಪ್ರತಿಯೊಬ್ಬರಿಗೂ ಪ್ರೇರೇಪಿತವಾಗಿವೆ।”

***