Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಲೋಕಮಾನ್ಯ ತಿಲಕರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದ ಪ್ರಧಾನಮಂತ್ರಿ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಲೋಕಮಾನ್ಯ ತಿಲಕರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ಧೈರ್ಯ, ಹೋರಾಟ ಮತ್ತು ಸಮರ್ಪಣಾ ಮನೋಭಾವವು ದೇಶವಾಸಿಗಳಿಗೆ ಸದಾ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಸಂಪೂರ್ಣ ಸ್ವಾತಂತ್ರ್ಯದ ಬೇಡಿಕೆಯೊಂದಿಗೆ ವಿದೇಶಿಯರ ಆಳ್ವಿಕೆಯ ಬುನಾದಿ ಬುಡಮೇಲು ಮಾಡಿದ ನಾಡಿನ ಅಮರ ಹೋರಾಟಗಾರ ಲೋಕಮಾನ್ಯ ತಿಲಕರಿಗೆ ಅವರ ಜನ್ಮ ದಿನದಂದು ಕೋಟ್ಯಂತರ ನಮನಗಳು. ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ಧೈರ್ಯ, ಹೋರಾಟ ಮತ್ತು ಸಮರ್ಪಣಾ ಕಥೆಯು ದೇಶವಾಸಿಗಳಿಗೆ ಸದಾ ಸ್ಫೂರ್ತಿ ನೀಡುತ್ತದೆ’’. 

*******