Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಲೋಕಮಾನ್ಯ ತಿಲಕರ ಪುಣ್ಯತಿಥಿ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಮಾನ್ಯ ತಿಲಕರ ಪುಣ್ಯತಿಥಿ ಹಿನ್ನೆಲೆಯಲ್ಲಿ ನಮನ ಸಲ್ಲಿಸಿದ್ದಾರೆ.

ಪುಣೆಯಲ್ಲಿ ಇಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಶ್ರೀ ನರೇಂದ್ರ ಮೋದಿಯವರು ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಇದೇ ವೇಳೆ ಪ್ರಧಾನಮಂತ್ರಿ ಮೋದಿ ಅವರು ಪುಣೆಯಲ್ಲಿ ಪೂರ್ಣಗೊಂಡಿರುವ ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಜತೆಗೆ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಪ್ರಧಾನ ಮಂತ್ರಿಗಳು, “ನಾನು ಲೋಕಮಾನ್ಯ ತಿಲಕರ ಪುಣ್ಯತಿಥಿ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸುತ್ತೇನೆ. ಇಂದು ನಾನು ಪುಣೆಯಲ್ಲಿ ಇರಲಿದ್ದು, ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನೂ ಸ್ವೀಕರಿಸಲಿದ್ದೇನೆ. ನಮ್ಮ ಇತಿಹಾಸದಲ್ಲಿ ಶ್ರೇಷ್ಠ ವ್ಯಕ್ತಿತ್ವದ ಮಹತ್ತರ ಕಾರ್ಯದೊಂದಿಗೆ ನಿಕಟ ಸಂಬಂಧ ಹೊಂದಿರುವ ಈ ಪ್ರಶಸ್ತಿಗೆ ನಾನು ಭಾಜನನಾಗಿರುವುದಕ್ಕೆ ನಿಜಕ್ಕೂ ವಿನೀತನಾಗಿದ್ದೇನೆ,ʼʼ ಎಂದು ಹೇಳಿದ್ದಾರೆ.

“ಇದೇ ಸಂದರ್ಭದಲ್ಲಿ ನಾನು ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ಜತೆಗೆ ಹೊಸ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದೇನೆ,ʼʼ ಎಂದು ತಿಳಿಸಿದ್ದಾರೆ.

**