ಬರ್ಲಿನ್‌ನಲ್ಲಿ ನಡೆದ ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟಮೊದಲ ಬಾರಿಗೆ ಚಿನ್ನದ ಪದಕವನ್ನು ಗೆದ್ದು ತಂದುಕೊಟ್ಟ ಭಾರತದ ಮಹಿಳಾ ಸಂಯುಕ್ತ ತಂಡವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು: “ಭಾರತಕ್ಕೆ ಇದೊಂದು ಹೆಮ್ಮೆಯ ಕ್ಷಣವಾಗಿದೆ. ಮಹಿಳೆಯರ ಸಂಯುಕ್ತ ತಂಡ ಅಸಾಧಾರಣ ಪ್ರದರ್ಶನ ನೀಡಿ ಬರ್ಲಿನ್‌ನಲ್ಲಿ ನಡೆದ ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟಮೊದಲ ಬಾರಿಗೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ವಿಜೇತರಿಗೆ ಅಭಿನಂದನೆಗಳು! ತಂಡದ ಸದಸ್ಯರ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಈ ಅತ್ಯುತ್ತಮ ಫಲಿತಾಂಶಕ್ಕೆ ಕಾರಣವಾಗಿದೆ.”ಎಂದು ಬರೆದುಕೊಂಡಿದ್ದಾರೆ.
***
A proud moment for India as our exceptional compound Women's Team brings home India's first-ever gold medal in the World Archery Championship held in Berlin. Congratulations to our champions! Their hard work and dedication have led to this outstanding outcome. pic.twitter.com/oT8teX1bod
— Narendra Modi (@narendramodi) August 5, 2023