Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಾಂಗ್ಲಾದೇಶದ ಪ್ರಧಾನಮಂತ್ರಿ ಘನತೆವೆತ್ತ ಶೇಖ್ ಹಸೀನಾ ಅವರನ್ನು ಭೇಟಿಮಾಡಿದ ಪ್ರಧಾನಮಂತ್ರಿ

ಬಾಂಗ್ಲಾದೇಶದ ಪ್ರಧಾನಮಂತ್ರಿ ಘನತೆವೆತ್ತ ಶೇಖ್ ಹಸೀನಾ ಅವರನ್ನು ಭೇಟಿಮಾಡಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ  ಅಧಿಕೃತ ನಿವಾಸದಲ್ಲಿ ಅವರನ್ನು ಬಾಂಗ್ಲಾದೇಶದ ಪ್ರಧಾನಮಂತ್ರಿ  ಘನತೆವೆತ್ತ ಶೇಖ್ ಹಸೀನಾ ಅವರು ಭೇಟಿಮಾಡಿದರು. ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶ ಪ್ರಧಾನಮಂತ್ರಿ ಅವರು  ಭಾರತಕ್ಕೆ ಬಂದಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;

“ಪ್ರಧಾನಮಂತ್ರಿ ಶೇಖ್ ಹಸೀನಾ ಅವರೊಂದಿಗೆ ಫಲಪ್ರದವಾದ ಸಮಾಲೋಚನೆಗಳನ್ನು ನಡೆಸಲಾಯಿತು. ಕಳೆದ 9 ವರ್ಷಗಳಲ್ಲಿ ಭಾರತ-ಬಾಂಗ್ಲಾದೇಶ ಸಂಬಂಧಗಳಲ್ಲಿನ ಪ್ರಗತಿಯು ತುಂಬಾ ಸಂತೋಷದಾಯಕವಾಗಿದೆ. ನಮ್ಮ ಮಾತುಕತೆಗಳು ಪರಸ್ಪರ ಸಂಪರ್ಕ, ವಾಣಿಜ್ಯ ವ್ಯವಸ್ಥೆಗಳು ಮತ್ತು ಇನ್ನೂ ಹೆಚ್ಚಿನ ಹಲವು ಕ್ಷೇತ್ರಗಳನ್ನು ಒಳಗೊಂಡಿದ್ದವು.”

ಪ್ರಧಾನಮಂತ್ರಿ ಕಾರ್ಯಾಲಯವು ಕೂಡ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಪ್ರಕಟಿಸಿದೆ;

“ಭಾರತ-ಬಾಂಗ್ಲಾದೇಶದ ದ್ವಿಪಕ್ಷೀಯ ಸಹಕಾರವನ್ನು ವೈವಿಧ್ಯಗೊಳಿಸಲು ಪ್ರಧಾನಮಂತ್ರಿ ಶೇಖ್ ಹಸೀನಾ ಅವರೊಂದಿಗೆ ಪ್ರಧಾನಮಂತ್ರಿ @ನರೇಂದ್ರಮೋದಿ ( @narendramodi ) ಅವರು ಫಲಪ್ರದವಾದ  ಮಾತುಕತೆ ನಡೆಸಿದರು. ಪರಸ್ಪರ ಸಂಪರ್ಕ, ವಾಣಿಜ್ಯ , ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ಅತಿಥಿ ವಲಯಗಳಲ್ಲಿ ಪರಸ್ಪರ ಸಂಬಂಧಗಳನ್ನು ಬಲಪಡಿಸಲು ಅವರುಗಳು ಸಮ್ಮತಿಸಿದರು.”

 

*********