Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​50 ಮೀಟರ್ ರೈಫಲ್ 3 ಪೊಸಿಷನ್ಸ್ ಮಹಿಳೆಯರ ಶೂಟಿಂಗ್‌ನಲ್ಲಿ ಚಿನ್ನದ ಪದಕ ಗೆದ್ದ ಸಿಫ್ಟ್ ಕೌರ್ ಸಮ್ರಾ ಅವರಿಗೆ ಪ್ರಧಾನಿ ಅಭಿನಂದನೆ


ಏಷ್ಯನ್ ಕ್ರೀಡಾಕೂಟದಲ್ಲಿ 50 ಮೀಟರ್ ರೈಫಲ್ 3 ಪೊಸಿಷನ್ಸ್ ಮಹಿಳೆಯರ ಶೂಟಿಂಗ್‌ನಲ್ಲಿ ಚಿನ್ನದ ಪದಕ ಗೆದ್ದ ಸಿಫ್ಟ್ ಕೌರ್ ಸಮ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು  ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “50 ಮೀ ರೈಫಲ್ 3 ಪೊಸಿಷನ್ಸ್ ಮಹಿಳೆಯರ ಶೂಟಿಂಗ್‌ನಲ್ಲಿ ಚಿನ್ನದ ಪದಕವನ್ನು ಗೆದ್ದು ತರುವ ಮೂಲಕ ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸ ಬರೆದ @SiftSamra ಅವರಿಗೆ ಅಭಿನಂದನೆಗಳು. ಅವರು ದಾಖಲೆ ನಿರ್ಮಿಸಿರುವುದು ಇನ್ನಷ್ಟು ಸಂತಸ ತಂದಿದೆ. ಆಕೆ ಪ್ರತಿಯೊಬ್ಬ ಭಾರತೀಯನಿಗೂ ಸ್ಪೂರ್ತಿ. ಅವರ ಮುಂಬರುವ ಪ್ರಯತ್ನಗಳಿಗೆ ಶುಭಾಶಯಗಳು.” ಎಂದು ಬರೆದುಕೊಂಡಿದ್ದಾರೆ.