Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪುರುಷರ ಸ್ಕೀಟ್  ಶೂಟಿಂಗ್ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದ ಅನಂತ್ ಜೀತ್ ಸಿಂಗ್ ನರುಕಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಏಷ್ಯನ್ ಗೇಮ್ಸ್‌ ನ ಪುರುಷರ ಸ್ಕೀಟ್  ಶೂಟಿಂಗ್ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದಿದ್ದಕ್ಕಾಗಿ ಅನಂತ್ ಜೀತ್ ಸಿಂಗ್ ನರುಕಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;

“ನಮ್ಮ ಕ್ರೀಡಾಪಟುಗಳು ಏಷ್ಯನ್ ಗೇಮ್ಸ್‌ ನಲ್ಲಿ ಇತಿಹಾಸವನ್ನು ಬರೆಯುವುದನ್ನು ಮುಂದುವರೆಸಿದ್ದಾರೆ!

ಪುರುಷರ ಸ್ಕೀಟ್ ಶೂಟಿಂಗ್ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದಿದ್ದಕ್ಕಾಗಿ ಅನಂತ್ ಜೀತ್ ಸಿಂಗ್ ನರುಕಾ ಅವರಿಗೆ ಅಭಿನಂದನೆಗಳು.  ಇದು ಏಷ್ಯನ್ ಗೇಮ್ಸ್‌ ನಲ್ಲಿ ಈ ಸ್ಪರ್ಧಾ ವಿಭಾಗ ಇತಿಹಾಸದಲ್ಲಿ ಭಾರತ ಗೆದ್ದ ಮೊತ್ತಮೊದಲ ಪದಕವಾಗಿದೆ.

ಈ ಯಶಸ್ಸು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಲಿ.”

***