Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಸಿಕ್ಕಿಂ ಮುಖ್ಯಮಂತ್ರಿಯವರೊಂದಿಗೆ ಮಾತನಾಡಿದ ಪ್ರಧಾನಮಂತ್ರಿಯವರು  


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಿಕ್ಕಿಂನ ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಅವರೊಂದಿಗೆ ಮಾತನಾಡಿದರು ಮತ್ತು ದುರದೃಷ್ಟವಶಾತ್ ಸಿಕ್ಕಿಂನ ಕೆಲವು ಭಾಗಗಳಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಅವಲೋಕನಗೈದರು. ಇಂತಹ ಪರಿಸ್ಥಿತಿಯಲ್ಲಿ ಸಾಧ್ಯವಿರುವ ಎಲ್ಲ ರೀತಿಯ ಬೆಂಬಲವನ್ನೂ ನೀಡುವುದಾಗಿ ಅವರು ಭರವಸೆ ನೀಡಿದರು. 
ಸಂತ್ರಸ್ತರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಶ್ರೀ ಮೋದಿಯವರು ಪ್ರಾರ್ಥಿಸಿದರು.

ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ;

“ಸಿಕ್ಕಿಂ ಮುಖ್ಯಮಂತ್ರಿ ಶ್ರೀ @PSTamangGolay ಅವರೊಂದಿಗೆ ಮಾತನಾಡಿದ್ದೇನೆ ಮತ್ತು ರಾಜ್ಯದ ಕೆಲವು ಭಾಗಗಳಲ್ಲಿ ದುರದೃಷ್ಟಕರ ನೈಸರ್ಗಿಕ ವಿಕೋಪದ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ. ಈ  ಸವಾಲನ್ನು ಎದುರಿಸಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವ ಭರವಸೆ ನೀಡಲಾಗಿದೆ. ಎಲ್ಲ ಸಂತ್ರಸ್ತರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ”

 

***