Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ SH6 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ನಿತ್ಯಾ ಶ್ರೀ ಶಿವನ್ ಅವರಿಗೆ ಪ್ರಧಾನಮಂತ್ರಿ ಅಭಿನಂದಿಸಿದರು.


ಚೀನಾದ ಹ್ಯಾಂಗ್ಝೌನಲ್ಲಿ 2022 ರ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ SH6 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ನಿತ್ಯ ಶ್ರೀ ಶಿವನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ.

ಪ್ಯಾರಾ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ SH6 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಪ್ಯಾರಾ ಶಟ್ಲರ್ ನಿತ್ಯಾ ಶ್ರೀ ಶಿವನ್ ಅವರಿಗೆ ಅಭಿನಂದನೆಗಳು. ಆಕೆಯ ಅಚಲ ನಿರ್ಣಯ ಮತ್ತು ಅಸಾಧಾರಣ ಕೌಶಲ್ಯ ನಮಗೆಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

 

***