Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸರ್ದಾರ್ ವಲ್ಲಭಬಾಯಿ ಪಟೇಲ್ ಜಯಂತಿ: ಪ್ರಧಾನಿ ಮೋದಿ ಸ್ಮರಣೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪಟೇಲ್ ಅವರ ಅದಮ್ಯ ಮನೋಭಾವ, ದೂರದೃಷ್ಟಿಯ ರಾಜನೀತಿ ಮತ್ತು ಅಸಾಧಾರಣ ಸಮರ್ಪಣೆ ಮನೋಭಾವದಿಂದ ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸಿದವರು ಎಂದು ಸ್ಮರಿಸಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

ಸರ್ದಾರ್ ಪಟೇಲ್ ಅವರ ಜಯಂತಿಯಂದು, ಅವರ ಅದಮ್ಯ ಮನೋಭಾವ, ದೂರದೃಷ್ಟಿಯ ರಾಜನೀತಿ ಮತ್ತು ಅವರು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸಿದ ಅಸಾಧಾರಣ ಸಮರ್ಪಣೆಯನ್ನು ನಾವು ನೆನಪಿಸಿಕೊಳ್ಳುತ್ತೇವೆ. ರಾಷ್ಟ್ರದ ಏಕೀಕರಣಕ್ಕೆ ಅವರ ಬದ್ಧತೆ ನಮಗೆ ಮಾರ್ಗದರ್ಶನ ನೀಡುತ್ತಲೇ ಇದೆ. ಅವರು ದೇಶಕ್ಕೆ ಸಲ್ಲಿಸಿದ ಸೇವೆಗೆ ನಾವು ಸದಾ ಋಣಿಯಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.

***