Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್: ಭಾರತ ತಂಡಕ್ಕೆ ಪ್ರಧಾನಿ ಮೋದಿ ಶುಭಾಶಯ


ಐಸಿಸಿ ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಆಡುತ್ತಿರುವ ಟೀಂ ಇಂಡಿಯಾಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

ಈ ಬಾರಿಯ ಇಡೀ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡ ಅಜೇಯವಾಗಿ ಸರಣಿಯನ್ನು ಕಾಯ್ದುಕೊಂಡು ಬಂದಿದ್ದು, ಇಂದು ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿಯವರು,

“ಆಲ್ ದಿ ಬೆಸ್ಟ್ ಟೀಂ ಇಂಡಿಯಾ! 140 ಕೋಟಿ ಭಾರತೀಯರು ನಿಮ್ಮನ್ನು ಹುರಿದುಂಬಿಸುತ್ತಿದ್ದಾರೆ. ನೀವು ಪ್ರಕಾಶಮಾನವಾಗಿ ಮಿಂಚಿ, ಚೆನ್ನಾಗಿ ಆಟವಾಡಿ ಕ್ರೀಡಾ ಮನೋಭಾವವನ್ನು ಎತ್ತಿ ಹಿಡಿಯಿರಿ” ಎಂದು ಬರೆದು ಶುಭಕೋರಿದ್ದಾರೆ.