ಮಹಾರಾಷ್ಟ್ರ ರಾಜ್ಯದ ಸಿಂಧುದುರ್ಗ್ ನ ರಾಜ್ ಕೋಟ್ ಫೋರ್ಟ್ ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿ ಅನಾವರಣಗೊಳಿಸಿದರು. ಶ್ರೀ ಮೋದಿ ಅವರು ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ, ಛಾಯಾಚಿತ್ರಗಳ ಗ್ಯಾಲರಿ ವೀಕ್ಷಿಸಿದರು.
ಈ ಬಗ್ಗೆ ಟ್ವಿಟರ್ (ಎಕ್ಸ್ ) ನಲ್ಲಿ ಪೋಸ್ಟ್ ಮಾಡಿರುವ ಅವರು,
“ಇಂದು ಸಂಜೆ (2023ರ ಡಿಸೆಂಬರ್ 4), ರಾಜ್ ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಪ್ರತಿಮೆ ಅನಾವರಣ ಮಾಡಿದೆ” ಎಂದಿದ್ದಾರೆ.
ಮಹಾರಾಷ್ಟ್ರ ರಾಜ್ಯಪಾಲ ಶ್ರೀ ರಮೇಶ್ ಬಾಯಿಸ್, ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಶ್ರೀ ನಾರಾಯಣ್ ರಾಣೆ, ಮಹಾರಾಷ್ಟ್ರ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಶ್ರೀ ಅಜಿತ್ ಪವಾರ್, ನೌಕಾಪಡೆ ಮುಖ್ಯಸ್ಥರಾದ ಅಡ್ಮಿರಲ್ ಆರ್. ಹರಿಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
***
Earlier this evening, unveiled a grand statue of Chhatrapati Shivaji at Rajkot fort. pic.twitter.com/ucFracNM5r
— Narendra Modi (@narendramodi) December 4, 2023
आज संध्याकाळी, राजकोट किल्ल्यावरील छत्रपती शिवाजी महाराजांच्या भव्य पुतळ्याचे अनावरण करण्यात आले. pic.twitter.com/6TWKZcTBtP
— Narendra Modi (@narendramodi) December 4, 2023