Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನವೀ ಮುಂಬೈನಲ್ಲಿ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವಾ ಶೇವಾ ಅಟಲ್ ಸೇತುವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

ನವೀ ಮುಂಬೈನಲ್ಲಿ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವಾ ಶೇವಾ ಅಟಲ್ ಸೇತುವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವೀ ಮುಂಬೈನಲ್ಲಿ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವಾ ಶೇವಾ ಅಟಲ್ ಸೇತುವನ್ನು ಉದ್ಘಾಟಿಸಿದರು. ಶ್ರೀ ನರೇಂದ್ರ ಮೋದಿ ಅವರು ಫೋಟೋ ಗ್ಯಾಲರಿ ಮತ್ತು ಅಟಲ್ ಸೇತುವಿನ ಪ್ರದರ್ಶನ ಮಾದರಿಯನ್ನು ವೀಕ್ಷಿಸಿದರು.

ಎಂಟಿಎಚ್ಎಲ್ ಅಟಲ್ ಸೇತುವನ್ನು 17,840 ಕೋಟಿ ರೂ.ಗಿಂತ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗಿದೆ ಮತ್ತು ಇದು ಸುಮಾರು 21.8 ಕಿ.ಮೀ ಉದ್ದದ 6 ಪಥದ ಸೇತುವೆಯಾಗಿದ್ದು, ಸಮುದ್ರದ ಮೇಲೆ ಸುಮಾರು 16.5 ಕಿ.ಮೀ ಉದ್ದ ಮತ್ತು ಭೂಮಿಯಲ್ಲಿ ಸುಮಾರು 5.5 ಕಿ.ಮೀ ಉದ್ದವಿದೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ:

“ನಮ್ಮ ನಾಗರಿಕರಿಗೆ ‘ಸುಗಮ ಜೀವನ’ವನ್ನು ಹೆಚ್ಚಿಸುವ ಮಹತ್ವದ ಹೆಜ್ಜೆಯಾದ ಅಟಲ್ ಸೇತುವನ್ನು ಉದ್ಘಾಟಿಸಲು ಸಂತೋಷವಾಗಿದೆ. ಈ ಸೇತುವೆಯು ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ ಮತ್ತು ಸಂಪರ್ಕವನ್ನು ಹೆಚ್ಚಿಸುತ್ತದೆ, ದೈನಂದಿನ ಪ್ರಯಾಣವನ್ನು ಸುಗಮಗೊಳಿಸುತ್ತದೆ,’’ಎಂದಿದ್ದಾರೆ.

ಪ್ರಧಾನಮಂತ್ರಿಯವರೊಂದಿಗೆ ಮಹಾರಾಷ್ಟ್ರ ರಾಜ್ಯಪಾಲ ಶ್ರೀ ರಮೇಶ್ ಬೈಸ್, ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವೀಸ್ ಮತ್ತು ಶ್ರೀ ಅಜಿತ್ ಪವಾರ್ ಇದ್ದರು.

ಅಟಲ್ ಬಿಹಾರಿ ವಾಜಪೇಯಿ ಸೇತು – ನವಾ ಶೇವಾ ಅಟಲ್ ಸೇತು

ನಗರ ಸಾರಿಗೆ ಮೂಲಸೌಕರ್ಯ ಮತ್ತು ಸಂಪರ್ಕವನ್ನು ಬಲಪಡಿಸುವ ಮೂಲಕ ನಾಗರಿಕರ ‘ಸುಗಮ ಚಲನಶೀಲತೆಯನ್ನು’ ಸುಧಾರಿಸುವುದು ಪ್ರಧಾನಿಯವರ ದೃಷ್ಟಿಕೋನವಾಗಿದೆ. ಈ ದೃಷ್ಟಿಕೋನಕ್ಕೆ ಅನುಗುಣವಾಗಿ, ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (ಎಂಟಿಎಚ್ಎಲ್) ಅನ್ನು ಈಗ ‘ಅಟಲ್ ಬಿಹಾರಿ ವಾಜಪೇಯಿ ಸೇವ್ರಿ – ನವಾ ಶೇವಾ ಅಟಲ್ ಸೇತು’ ಎಂದು ಹೆಸರಿಸಲಾಗಿದೆ. ಈ ಸೇತುವೆಗೆ ಪ್ರಧಾನಮಂತ್ರಿ ಅವರು 2016ರ ಡಿಸೆಂಬರ್ ನಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದರು.

ಅಟಲ್ ಸೇತುವನ್ನು ಒಟ್ಟು 17,840 ಕೋಟಿ ರೂ.ಗಿಂತ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಸುಮಾರು 21.8 ಕಿ.ಮೀ ಉದ್ದದ 6 ಪಥದ ಸೇತುವೆಯಾಗಿದ್ದು, ಸಮುದ್ರದ ಮೇಲೆ ಸುಮಾರು 16.5 ಕಿ.ಮೀ ಉದ್ದ ಮತ್ತು ಭೂಮಿಯಲ್ಲಿ ಸುಮಾರು 5.5 ಕಿ.ಮೀ ಉದ್ದವಿದೆ. ಇದು ಭಾರತದ ಅತಿ ಉದ್ದದ ಸೇತುವೆ ಮತ್ತು ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾಗಿದೆ. ಇದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನವೀ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೇಗದ ಸಂಪರ್ಕವನ್ನು ಒದಗಿಸುತ್ತದೆ ಮತ್ತು ಮುಂಬೈನಿಂದ ಪುಣೆ, ಗೋವಾ ಮತ್ತು ದಕ್ಷಿಣ ಭಾರತಕ್ಕೆ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಇದು ಮುಂಬೈ ಬಂದರು ಮತ್ತು ಜವಾಹರಲಾಲ್ ನೆಹರು ಬಂದರಿನ ನಡುವಿನ ಸಂಪರ್ಕವನ್ನು ಸುಧಾರಿಸುತ್ತದೆ.

*****