Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವೈದ್ಯಕೀಯ ಉತ್ಪನ್ನಗಳ ನಿಯಂತ್ರಣ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಡೊಮಿನಿಕನ್ ರಿಪಬ್ಲಿಕ್ ನಡುವಿನ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ, ಭಾರತ ಗಣರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್ ಸಿಒ) ಮತ್ತು ಸಾರ್ವಜನಿಕ ಆರೋಗ್ಯ ಸಚಿವಾಲಯದ ಔಷಧ, ಆಹಾರ ಮತ್ತು ನೈರ್ಮಲ್ಯ ಉತ್ಪನ್ನಗಳ ಸಂಸ್ಥೆಗಳ ಮಹಾನಿರ್ದೇಶನಾಲಯ ಮತ್ತು ಡೊಮಿನಿಕನ್ ರಿಪಬ್ಲಿಕ್ ನ ಸಾಮಾಜಿಕ ಸಹಾಯಕರ ನಡುವೆ ವೈದ್ಯಕೀಯ ಉತ್ಪನ್ನಗಳ ನಿಯಂತ್ರಣ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಅಂಕಿತ ಹಾಕಲಾದ ತಿಳಿವಳಿಕೆ ಒಪ್ಪಂದದ ಬಗ್ಗೆ ವಿವರಿಸಲಾಯಿತು. ಈ ತಿಳಿವಳಿಕೆ ಒಪ್ಪಂದಕ್ಕೆ 2023ರ ಅಕ್ಟೋಬರ್ 4ರಂದು ಅಂಕಿತ ಹಾಕಲಾಗಿತ್ತು.

ಈ ತಿಳಿವಳಿಕೆ ಒಪ್ಪಂದವು ವೈದ್ಯಕೀಯ ಉತ್ಪನ್ನಗಳು ಮತ್ತು ಸಂಬಂಧಿತ ಆಡಳಿತಾತ್ಮಕ ಮತ್ತು ನಿಯಂತ್ರಕ ವಿಷಯಗಳಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಮಾಹಿತಿಯ ವಿನಿಮಯ ಮತ್ತು ಸಹಕಾರವನ್ನು ಪಕ್ಷಕಾರರ ವ್ಯಾಪ್ತಿಯಲ್ಲಿ ಉತ್ತೇಜಿಸುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಚಲನೆಯಲ್ಲಿರುವ ಕಳಪೆ ಗುಣಮಟ್ಟದ, ನಕಲಿ ಔಷಧಿಗಳ ಸಮಸ್ಯೆಗಳನ್ನು ನಿಭಾಯಿಸುವ ಸಲುವಾಗಿ, ನಿಯಂತ್ರಕ ಸಂಸ್ಥೆಗಳ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಸಂವಹನವನ್ನು ಸುಗಮಗೊಳಿಸಲಾಗುತ್ತದೆ.

ನಿಯಂತ್ರಕ ಅಭ್ಯಾಸಗಳಲ್ಲಿನ ಒಮ್ಮತವು ಭಾರತದಿಂದ ಔಷಧಿಗಳ ರಫ್ತನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಔಷಧೀಯ ಕ್ಷೇತ್ರದಲ್ಲಿ ವಿದ್ಯಾವಂತ ವೃತ್ತಿಪರರಿಗೆ ಉತ್ತಮ ಉದ್ಯೋಗಾವಕಾಶಗಳಿಗೆ ಸಹಾಯ ಮಾಡುತ್ತದೆ. ಈ ತಿಳಿವಳಿಕೆ ಒಪ್ಪಂದವು ವಿದೇಶಿ ವಿನಿಮಯ ಗಳಿಕೆಗೆ ಕಾರಣವಾಗುವ ವೈದ್ಯಕೀಯ ಉತ್ಪನ್ನಗಳ ರಫ್ತಿಗೆ ಅವಕಾಶ ಕಲ್ಪಿಸುತ್ತದೆ. ಇದು ಆತ್ಮನಿರ್ಭರ ಭಾರತದತ್ತ ಒಂದು ಹೆಜ್ಜೆಯಾಗಲಿದೆ.

*****