ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಭಾರತ ಸರ್ಕಾರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರದ ನಡುವೆ ದ್ವಿಪಕ್ಷೀಯ ಹೂಡಿಕೆ ಒಪ್ಪಂದಕ್ಕೆ ಅಂಕಿತ ಹಾಕಿ ಅದನ್ನು ಸ್ಥಿರೀಕರಿಸಲು ತನ್ನ ಅನುಮೋದನೆಯನ್ನು ನೀಡಿದೆ.
ಈ ಒಪ್ಪಂದವು ಹೂಡಿಕೆದಾರರಿಗೆ, ವಿಶೇಷವಾಗಿ ದೊಡ್ಡ ಹೂಡಿಕೆದಾರರ ವಿಶ್ವಾಸವನ್ನು ಹೊಂದುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ ವಿದೇಶಿ ಹೂಡಿಕೆಗಳು ಮತ್ತು ವೀದೇಶಿ ನೇರ ಹೂಡಿಕೆ (ಒಡಿಐ) ಅವಕಾಶಗಳಲ್ಲಿ ಹೆಚ್ಚಳವಾಗುವ ನಿರೀಕ್ಷೆ ಇದ್ದು, ಉದ್ಯೋಗ ಸೃಷ್ಟಿಯ ಮೇಲೆ ಇದು ಸಕಾರಾತ್ಮಕ ಪರಿಣಾಮ ಬೀರಲಿದೆ.
ಈ ಒಪ್ಪಂದದ ಅನುಮೋದನೆಯು ಭಾರತದಲ್ಲಿ ಹೂಡಿಕೆಯನ್ನು ಹೆಚ್ಚಿಸುವ ನಿರೀಕ್ಷೆಯಿದ್ದು, ದೇಶೀಯ ಉತ್ಪಾದನೆಯನ್ನು ಉತ್ತೇಜಿಸಿ, ಆಮದು ಅವಲಂಬನೆಯನ್ನು ಕಡಿಮೆ ಮಾಡಿ, ರಫ್ತು ಹೆಚ್ಚಿಸುವ ಮೂಲಕ ಆತ್ಮನಿರ್ಭರ ಭಾರತದ ಗುರಿಯನ್ನು ಸಾಧಿಸಲು ಸಹಾಯ ಮಾಡುವ ನಿರೀಕ್ಷೆ ಇದೆ.
****