Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಂಸದ ಡಿ.ಶ್ರೀನಿವಾಸ್ ಅವರ ನಿಧನಕ್ಕೆ ಪ್ರಧಾನಿಯವರಿಂದ ಸಂತಾಪ ಸೂಚನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಾಜಿ ರಾಜ್ಯಸಭಾ ಸದಸ್ಯ (ಸಂಸದ) ಶ್ರೀ ಡಿ. ಶ್ರೀನಿವಾಸ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 

ಶ್ರೀ ಡಿ. ಶ್ರೀನಿವಾಸ್ ಅವರ ಸಾರ್ವಜನಿಕ ಸೇವೆ ಮತ್ತು ಬಡವರ ಉದ್ದಾರದ ಪ್ರಯತ್ನಗಳಿಗಾಗಿ ಅವರನ್ನು ಸ್ಮರಿಸಲಾಗುವುದು ಎಂದು ಪ್ರಧಾನಿಯವರು ಹೇಳಿದರು. 

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

“ಮಾಜಿ ಸಂಸದ ಡಿ.ಶ್ರೀನಿವಾಸ್ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಸಾರ್ವಜನಿಕ ಸೇವೆಯಲ್ಲಿ ಅವರ ಸುದೀರ್ಘ ಸೇವೆ ಮತ್ತು ಬಡವರನ್ನು ಸಬಲೀಕರಣಗೊಳಿಸುವ ಪ್ರಯತ್ನಗಳಿಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬದವರಿಗೆ ಮತ್ತು ಬೆಂಬಲಿಗರಿಗೆ ನನ್ನ ಸಂತಾಪ ಸೂಚನೆಗಳು” ಎಂದು ಹೇಳಿದ್ದಾರೆ.

*****