Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಪ್ರಧಾನಮಂತ್ರಿ

ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಪ್ರಧಾನಮಂತ್ರಿ


ಕ್ರೆಮ್ಲಿನ್ ನ ಸೇಂಟ್ ಆಂಡ್ರ್ಯೂ ಹಾಲ್ ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ, ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವ್ಲಾಡಿಮಿರ್ ಪುಟಿನ್ ರವರು ಭಾರತ-ರಷ್ಯಾ ಸಂಬಂಧಗಳ ಉತ್ತಮಗೊಳಿಸುವಿಕೆಗೆ ನೀಡಿದ ಕೊಡುಗೆಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ರಷ್ಯಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ “ದಿ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್” ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯನ್ನು 2019ರಲ್ಲಿ ಘೋಷಿಸಲಾಗಿತ್ತು.

ಈ ಪ್ರಶಸ್ತಿಯನ್ನು ಸ್ವೀಕರಿಸಿದ ಪ್ರಧಾನಮಂತ್ರಿಯವರು, ಅದನ್ನು ಭಾರತದ ಜನತೆಗೆ ಮತ್ತು ಭಾರತ ಹಾಗೂ ರಷ್ಯಾ ದೇಶಗಳ ನಡುವಿನ ಸಾಂಪ್ರದಾಯಿಕ ಸ್ನೇಹ ಸಂಬಂಧಗಳಿಗೆ ಸಮರ್ಪಿಸಿದರು. ತಮಗೆ ದೊರೆತ ಈ ಮಾನ್ಯತೆಯು ಉಭಯ ದೇಶಗಳ ನಡುವಿನ ವಿಶಿಷ್ಟವಾದ ವಿಶೇಷ ವ್ಯೂಹಾತ್ಮಕ ಪಾಲುದಾರಿಕೆಯನ್ನು ಬಿಂಬಿಸುತ್ತದೆ ಎಂದು ಅವರು ಹೇಳಿದರು.

ಈ ಪ್ರಶಸ್ತಿಯನ್ನು 300 ವರ್ಷಗಳ ಹಿಂದೆ ಸ್ಥಾಪಿಸಲಾಗಿದ್ದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಈ ಪ್ರಶಸ್ತಿಯನ್ನು ಪಡೆದ ಮೊದಲ ಭಾರತೀಯ ರಾಜಕೀಯ ಧುರೀಣರಾಗಿದ್ದಾರೆ.

*****