Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಸಂಸದ ಶ್ರೀ ಪ್ರಭಾತ್ ಝಾ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಮಾಜಿ ಸಂಸತ್ ಸದಸ್ಯರಾದ ಶ್ರೀ ಪ್ರಭಾತ್ ಝಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರ ಆಡಳಿತ ಚಾಣಾಕ್ಷತನವನ್ನು ಸ್ಮರಿಸಿರುವ ಪ್ರಧಾನಮಂತ್ರಿಗಳು, ಪತ್ರಿಕೋದ್ಯಮ ವಲಯಕ್ಕೆ ಝಾ ಅವರ ಕೊಡುಗೆಯನ್ನೂ ನೆನಪಿಸಿಕೊಂಡಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಭಾರತೀಯ ಜನತಾ ಪಕ್ಷದ ವರಿಷ್ಠ ನಾಯಕ ಮತ್ತು ಮಾಜಿ ಸಂಸದ ಪ್ರಭಾತ್ ಝಾ ಅವರ ನಿಧನದಿಂದ ಅತೀವ ದುಃಖವಾಗಿದೆ. ನಾನು ಅವರ ಕಾರ್ಯಶೈಲಿಯನ್ನು ಬಹಳ ಹತ್ತಿರದಿಂದ ನೋಡಿದ್ದು ಸಂಘಟನೆಯನ್ನು ಸಶಕ್ತಗೊಳಿಸಲು ಅವರು ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು. ಜನಸೇವೆಯ ಅವರ ಕಾರ್ಯಗಳ ಜೊತೆಗೆ ಅವರು ಪತ್ರಿಕೋದ್ಯಮ ಮತ್ತು ಬರವಣಿಗೆಯ ಕ್ಷೇತ್ರಗಳಿಗೂ ಅಮೂಲ್ಯವಾದ ಕೊಡುಗೆ ನೀಡಿದ್ದರು. ದುಃಖದ ಈ ಸಮಯದಲ್ಲಿ ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.!”

 

 

*****