Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನೇಪಾಳದ ವಿದೇಶಾಂಗ ವ್ಯವಹಾರಗಳ ಸಚಿವ ಘನತೆವೆತ್ತ ಡಾ. ಅರ್ಜು ರಾಣಾ ದೇವುಬಾ ಅವರು ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಿದರು


ವಿದೇಶಾಂಗ ಸಚಿವರ ಆಹ್ವಾನದ ಮೇರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿರುವ ನೇಪಾಳದ ವಿದೇಶಾಂಗ ವ್ಯವಹಾರಗಳ ಸಚಿವ ಘನತೆವೆತ್ತ ಡಾ. ಅರ್ಜು ರಾಣಾ ದೇವುಬಾ ಅವರು ಇಂದು ಪ್ರಧಾ ನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ನೇಪಾಳದ ವಿದೇಶಾಂಗ ಸಚಿವೆಯಾಗಿ ನೇಮಕಗೊಂಡಿದ್ದಕ್ಕಾಗಿ ಡಾ. ಅರ್ಜು ರಾಣಾ ದೇವುಬಾ ಅವರನ್ನು ಪ್ರಧಾನ ಮಂತ್ರಿಯವರು ಅಭಿನಂದಿಸಿದರು. ಉಭಯ ಪಕ್ಷಗಳ ನಡುವಿನ ಉನ್ನತ ಮಟ್ಟದ ಪೂರ್ವ ನಿರ್ಧಾರಿತ ಕಾರ್ಯಕ್ರಮಗಳ ನಿಶ್ಚಿತಾರ್ಥಗಳಲ್ಲಿ ನಡೆಯುತ್ತಿರುವ ವೇಗಗತಿಯನ್ನು ಪ್ರಧಾನ ಮಂತ್ರಿಯವರು ಶ್ಲಾಘಿಸಿದರು. ದ್ವಿಪಕ್ಷೀಯ ಸಂಬಂಧದಲ್ಲಿ ಈ ಸಂವಾದಗಳ ಸಕಾರಾತ್ಮಕ ಪರಿಣಾಮವನ್ನು ಎತ್ತಿ ಹಿಡಿದ ಪ್ರಧಾನ ಮಂತ್ರಿಯವರು, ಭಾರತ ಆಯೋಜಿಸಿರುವ 3ನೇ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ನೇಪಾಳದ ಪ್ರಧಾನಮಂತ್ರಿಯವರು ಭಾಗವಹಿಸಿದ್ದನ್ನು ಈ ಸಂದರ್ಭದಲ್ಲಿ ಶ್ಲಾಘಿಸಿದರು.

ಭಾರತದ ನೆರೆಹೊರೆ ಮೊದಲ ನೀತಿ ಮತ್ತು ನೇಪಾಳದೊಂದಿಗೆ ಭಾರತ ಕೈಗೊಂಡಿರುವ ವಿವಿಧ ಅಭಿವೃದ್ಧಿ ಸಹಕಾರ ಉಪಕ್ರಮಗಳಿಗಾಗಿ ವಿದೇಶಾಂಗ ಸಚಿವ ಡಾ. ಅರ್ಜು ರಾಣಾ ದೇವುಬಾ ಅವರು ಪ್ರಧಾನ ಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದರು. ಭಾರತ-ನೇಪಾಳ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಅವರು ತಿಳಿಸಿದರು. ನೇಪಾಳಕ್ಕೆ ಭೇಟಿ ನೀಡುವಂತೆ ನೇಪಾಳದ ಪ್ರಧಾನಮಂತ್ರಿಯವರಿಂದ ಅವರು ತಂದಿರುವ ಆಹ್ವಾನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಹಸ್ತಾಂತರಿಸಿದರು. ರಾಜತಾಂತ್ರಿಕ ಮಾರ್ಗಗಳ ಮೂಲಕ ನಿರ್ಧರಿಸಿ, ಪರಸ್ಪರ ಅನುಕೂಲಕರ ದಿನಾಂಕಗಳಲ್ಲಿ ನೇಪಾಳಕ್ಕೆ ಭೇಟಿ ನೀಡುವ ಆಹ್ವಾನವನ್ನು ಪ್ರಧಾನ ಮಂತ್ರಿಯವರು ಸ್ವೀಕರಿಸಿದರು.

  
*****