Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪೋಲೆಂಡ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ

ಪೋಲೆಂಡ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ


ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಾರ್ಸಾದ ಬೆಲ್ವೆಡರ್ ಅರಮನೆಯಲ್ಲಿ ಪೋಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಆಂಡ್ರೆಜ್ ಸೆಬಾಸ್ಟಿಯನ್ ಡುಡಾ ಅವರನ್ನು ಭೇಟಿ ಮಾಡಿದರು.

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು. ಭಾರತ-ಪೋಲೆಂಡ್ ಬಾಂಧವ್ಯವನ್ನು ವ್ಯೂಹಾತ್ಮಕ ಪಾಲುದಾರಿಕೆಯಾಗಿ ಉತ್ತಮೀಕರಿಸಿರುವುದನ್ನು ಉಭಯ ನಾಯಕರು ಸ್ವಾಗತಿಸಿದರು. ಯುಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಗಳು ಸೇರಿದಂತೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದರು.

‘ಆಪರೇಷನ್ ಗಂಗಾ’ ಸಂದರ್ಭದಲ್ಲಿ ಯುಕ್ರೇನ್ ನಿಂದ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಪೋಲೆಂಡ್ ನೀಡಿದ ಅತ್ಯಮೂಲ್ಯ ಹಾಗೂ ಸಮಯೋಚಿತ ಸಹಾಯಕ್ಕಾಗಿ ಪ್ರಧಾನಮಂತ್ರಿಯವರು ಪೋಲೆಂಡ್ ಗಣರಾಜ್ಯದ ಅಧ್ಯಕ್ಷರಿಗೆ ಪ್ರಾಮಾಣಿಕ ಕೃತಜ್ಞತೆ ಸಲ್ಲಿಸಿದರು.

ಭಾರತಕ್ಕೆ ಭೇಟಿ ನೀಡುವಂತೆ ಅಧ್ಯಕ್ಷ ದುಡಾ ಅವರಿಗೆ ಪ್ರಧಾನಮಂತ್ರಿಯವರು ತಮ್ಮ ಆಹ್ವಾನವನ್ನು ಪುನರುಚ್ಚರಿಸಿದರು.

*****