Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಸ್ಟ್ರೇಲಿಯಾ ಪ್ರಧಾನಮಂತ್ರಿ ಆಂಥೋನಿ ಅಲ್ಬನೀಸ್ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್ ಅವರೊಂದಿಗೆ ಮಾತುಕತೆ ನಡೆಸಿದರು. ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳಲ್ಲಿನ ಪ್ರಗತಿ ಮತ್ತು ಕ್ವಾಡ್ ಸೇರಿದಂತೆ ಬಹುಪಕ್ಷೀಯ ವೇದಿಕೆಗಳಲ್ಲಿ ಸಹಕಾರದ ಬಗ್ಗೆ ಮಾತುಕತೆ ನಡೆಸಿದರು. 

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ;

“ನನ್ನ ಸ್ನೇಹಿತ ಆಂಥೋನಿ ಅಲ್ಬನೀಸ್ ಅವರೊಂದಿಗೆ ಮಾತುಕತೆ ನಡೆಸಿದ್ದು ಸಂತೋಷವಾಯಿತು. ಕ್ವಾಡ್ ಸೇರಿದಂತೆ ಬಹುಪಕ್ಷೀಯ ವೇದಿಕೆಗಳಲ್ಲಿ ನಮ್ಮ ದ್ವಿಪಕ್ಷೀಯ ಸಂಬಂಧಗಳು ಮತ್ತು ಸಹಕಾರದಲ್ಲಿನ ಪ್ರಗತಿಯನ್ನು ನಾವು ಪರಿಶೀಲಿಸಿದೆವು.’’ ಎಂದು ತಿಳಿಸಿದೆ.

 

 

*****