Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ  


ತಮ್ಮ ಉಕ್ರೇನ್ ಭೇಟಿಯ ಒಳನೋಟಗಳನ್ನು ಹಂಚಿಕೊಂಡರು ಮತ್ತು ರಷ್ಯಾ-ಉಕ್ರೇನ್ ಸಂಘರ್ಷ ಕೊನೆಗೊಳಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆಯೇ ಮುಂದಿನ ದಾರಿ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುನರುಚ್ಚರಿಸಿದರು.

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದರು.

22ನೇ ಭಾರತ-ರಷ್ಯಾ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಭಾಗವಹಿಸಲು ಕಳೆದ ತಿಂಗಳು ರಷ್ಯಾಗೆ ನೀಡಿದ ತಮ್ಮ ಯಶಸ್ವಿ ಭೇಟಿಯನ್ನು ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು.

ಹಲವಾರು ದ್ವಿಪಕ್ಷೀಯ ವಿಷಯಗಳ ಪ್ರಗತಿಯನ್ನು ಉಭಯ ನಾಯಕರು ಪರಿಶೀಲಿಸಿದರು. ಭಾರತ ಹಾಗೂ ರಷ್ಯಾ ನಡುವಿನ ವಿಶೇಷ ಮತ್ತು ಅನನ್ಯವಾದ ವ್ಯೂಹತ್ಮಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಕ್ರಮಗಳ ಕುರಿತು ಉಭಯ ನಾಯಕರು ಚರ್ಚಿಸಿದರು. ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಉಭಯ ನಾಯಕರು ಅಭಿಪ್ರಾಯಗಳನ್ನು  ವಿನಿಮಯ ಮಾಡಿಕೊಂಡರು.

ಉಭಯ ನಾಯಕರು ಪ್ರಸ್ತುತ ರಷ್ಯಾ-ಉಕ್ರೇನ್ ಸಂಘರ್ಷದ ಕುರಿತು ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಪ್ರಧಾನಮಂತ್ರಿಯವರು ತಮ್ಮ ಇತ್ತೀಚಿನ ಉಕ್ರೇನ್ ಭೇಟಿಯ ಒಳನೋಟಗಳನ್ನು ಹಂಚಿಕೊಂಡರು. ಸಂಘರ್ಷಕ್ಕೆ‌ ಶಾಶ್ವತ ಮತ್ತು ಶಾಂತಿಯುತ ಪರಿಹಾರವನ್ನು ಸಾಧಿಸಲು ಎಲ್ಲಾ ಮಧ್ಯಸ್ಥಗಾರರ ನಡುವೆ ಸಂಭಾಷಣೆ, ರಾಜತಾಂತ್ರಿಕತೆ ಮತ್ತು ಪ್ರಾಮಾಣಿಕತೆ ಜೊತೆಗೆ ಪ್ರಾಯೋಗಿಕ ಕ್ರಮಗಳ  ಪ್ರಾಮುಖ್ಯತೆಯನ್ನು ಅವರು ಒತ್ತಿ ಹೇಳಿದರು.

ಉಭಯ ನಾಯಕರು ಸದಾ ಸಂಪರ್ಕದಲ್ಲಿರಲು ಪರಸ್ಪರ ಒಪ್ಪಿಕೊಂಡರು.
 

*****