Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಆರ್ 2 ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್ ಎಚ್ 1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಅವನಿ ಲೇಖರಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ


ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಆರ್ 2 ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್ ಎಚ್ 1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತೀಯ ಶೂಟರ್ ಅವನಿ ಲೇಖರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಮೂರು ಪ್ಯಾರಾಲಿಂಪಿಕ್ ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. 

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“Paralympics2024ರಲ್ಲಿ ಭಾರತಕ್ಕೆ ಮೊದಲ‌ ಪದಕ!

 ಆರ್ 2 ಮಹಿಳೆಯರ 10ಮೀಟರ್ ಏರ್ ರೈಫಲ್ ಎಸ್ ಎಚ್ 1 ಸ್ಪರ್ಧೆಯಲ್ಲಿ   ಬಯಸಿದಂತೆ ಚಿನ್ನದ ಪದಕ ಗೆದ್ದಿರುವ @AvaniLekhara ಅವರಿಗೆ ಅಭಿನಂದನೆಗಳು. ಅವರು 3 ಪ್ಯಾರಾಲಿಂಪಿಕ್ ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ!  ಅವರ ಸಮರ್ಪಣಾ ಭಾವವು ಭಾರತಕ್ಕೆ ಹೆಮ್ಮೆ ತ‍ಂದಿದೆ.

#Cheer4Bharat”

 

 

*****