Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕಂಚಿನ ಪದಕ ವಿಜೇತರಾದ ಬ್ಯಾಡ್ಮಿಂಟನ್ ಕ್ರೀಡಾಪಟು ನಿತ್ಯ ಶ್ರೀ ಸಿವನ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ


ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದದಲ್ಲಿ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ಎಸ್ ಎಚ್ 6 ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತೆ ನಿತ್ಯ ಶ್ರೀ ಸಿವನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. 

ಅವರ ಸಾಧನೆಯು ಅಸಂಖ್ಯಾತ ಜನರಿಗೆ ಪ್ರೇರಣೆಯಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

#Paralympics2024 ರಲ್ಲಿ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ಎಸ್ ಎಚ್ 6 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ನಿತ್ಯ ಶ್ರೀ ಸಿವನ್ ಅವರಿಗೆ ಅಭಿನಂದನೆಗಳು!  ಅವರ ಸಾಧನೆಯು ಅಸಂಖ್ಯಾತ ಜನರನ್ನು ಪ್ರೇರೇಪಿಸಿದೆ ಹಾಗೂ ಆಟದಲ್ಲಿ ಅವರ ಉತ್ಸಾಹ ಮತ್ತು  ಬದ್ಧತೆಯನ್ನು ತೋರಿಸುತ್ತದೆ.  @07nithyasre #Cheer4Bharat”

 

 

*****