ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಇಂದು ಐತಿಹಾಸಿಕ ಜಯ ಸಾಧಿಸಿದ ಶ್ರೀ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತ-ಯು.ಎಸ್. ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸಲು ಸಹಯೋಗವನ್ನು ನವೀಕರಿಸಲು ತಾನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯ ಸಂದೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಬರೆದಿದ್ದಾರೆ:
“ಐತಿಹಾಸಿಕ ಚುನಾವಣಾ ಗೆಲುವಿಗಾಗಿ ಸ್ನೇಹಿತ @realDonaldTrump ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಹಿಂದಿನ ಅವಧಿಯ ಯಶಸ್ಸಿನ ಮೇಲೆ ನೀವು ನಿರ್ಮಿಸುತ್ತಿರುವಂತೆ, ಭಾರತ-ಯು.ಎಸ್. ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಮ್ಮ ಸಹಯೋಗವನ್ನು ನವೀಕರಿಸಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ಜನರ ಸುಧಾರಣೆ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು, ನಾವು ಒಟ್ಟಾಗಿ ಕೆಲಸ ಮಾಡೋಣ.
*****
Heartiest congratulations my friend @realDonaldTrump on your historic election victory. As you build on the successes of your previous term, I look forward to renewing our collaboration to further strengthen the India-US Comprehensive Global and Strategic Partnership. Together,… pic.twitter.com/u5hKPeJ3SY
— Narendra Modi (@narendramodi) November 6, 2024