Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ


ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಅಗ್ನಿ ಅವಘಡದಿಂದ ಉಂಟಾದ ಸಾವುನೋವಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ನೆರವು ನೀಡಲು ಮುಂದಾಗಿದೆ ಎಂದು ಹೇಳಿದ್ದಾರೆ. 

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು:

“ಹೃದಯ ವಿದ್ರಾವಕ! ಉತ್ತರ ಪ್ರದೇಶದ ಝಾನ್ಸಿಯ ವೈದ್ಯಕೀಯ ಕಾಲೇಜಿನಲ್ಲಿ ಸಂಭವಿಸಿದ ಅಗ್ನಿ ಅವಘಡ ಹೃದಯ ವಿದ್ರಾವಕವಾಗಿದೆ. ಘಟನೆಯಲ್ಲಿ ತಮ್ಮ ಮುಗ್ಧ ಮಕ್ಕಳನ್ನು ಕಳೆದುಕೊಂಡವರಿಗೆ ನನ್ನ ತೀವ್ರ ಸಂತಾಪಗಳು. ಈ ಅಪಾರ ದುಃಖದಿಂದ ಜನರನ್ನು ದೇವರು ಪಾರು ಮಾಡಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸ್ಥಳೀಯ ಆಡಳಿತ ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕೆ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ” ಎಂದು ಬರೆದುಕೊಂಡಿದ್ದಾರೆ. 

ಈ ಸಂದರ್ಭದಲ್ಲಿ ಬೆಂಕಿ ಅವಘಡದಲ್ಲಿ ಸಜೀವ ದಹನಗೊಂಡ ಶಿಶುಗಳ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ನೀಡುವುದಾಗಿ ಪ್ರಕಟಿಸಿದ್ದಾರೆ. 

ಪ್ರಧಾನಮಂತ್ರಿ ಕಚೇರಿ (PMO) ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ:

“ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಸ್ಥರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಪ್ರಕಟಿಸಿದ್ದಾರೆ” ಎಂದು ಬರೆಯಲಾಗಿದೆ.

 

 

*****