Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪೋರ್ಚುಗಲ್‌ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

ಪೋರ್ಚುಗಲ್‌ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ G20 ಶೃಂಗಸಭೆಯ ನೇಪಥ್ಯದಲ್ಲಿ ಪೋರ್ಚುಗೀಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲೂಯಿಸ್ ಮಾಂಟೆನೆಗ್ರೊ ಅವರನ್ನು ಭೇಟಿ ಮಾಡಿದ್ದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. 2024ರ ಏಪ್ರಿಲ್‌ ನಲ್ಲಿ  ಪ್ರಧಾನಮಂತ್ರಿಯಾಗಿ ಮಾಂಟೆನೆಗ್ರೊ ಅಧಿಕಾರ ಸ್ವೀಕರಿಸಿದ್ದಾಗ ಪ್ರಧಾನಿ ನರೇಂದ್ರ ಮೋದಿ, ಅವರನ್ನು ಅಭಿನಂದಿಸಿದ್ದರು ಮತ್ತು ಭಾರತ ಮತ್ತು ಪೋರ್ಚುಗಲ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಗ್ಗೂಡಿ ಕೆಲಸ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಗೆ ಪ್ರಧಾನಿ ಮೊಂಟೆನೆಗ್ರೊ ಅವರು ಅಭಿನಂದನೆ ಸಲ್ಲಿಸಿದ್ದರು.

ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಜನರೊಂದಿಗೆ ಜನರ ಸಂಬಂಧಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಕುರಿತು ನಾಯಕರು ಚರ್ಚಿಸಿದರು. ಐಟಿ ಮತ್ತು ಡಿಜಿಟಲ್ ತಂತ್ರಜ್ಞಾನಗಳು, ನವೀಕರಿಸಬಹುದಾದ ಇಂಧನ, ಸ್ಟಾರ್ಟ್‌ಅಪ್‌ಗಳು ಮತ್ತು ನಾವೀನ್ಯತೆ ಮತ್ತು ವೃತ್ತಿಪರರು ಮತ್ತು ನುರಿತ ಕೆಲಸಗಾರರ ಚಲನಶೀಲತೆಯಂತಹ ಹೊಸ ಮತ್ತು ಉದಯೋನ್ಮುಖ ಕ್ಷೇತ್ರಗಳಲ್ಲಿ ಸಹಯೋಗಕ್ಕಾಗಿ ಬೆಳೆಯುತ್ತಿರುವ ಸಾಮರ್ಥ್ಯವನ್ನು ಅವರು ಒತ್ತಿಹೇಳಿದರು. ಉಭಯ ನಾಯಕರು ಪ್ರಾದೇಶಿಕ ಬೆಳವಣಿಗೆಗಳು ಮತ್ತು ಭಾರತ-ಇಯು ಸಂಬಂಧಗಳು ಸೇರಿದಂತೆ ಪರಸ್ಪರ ಹಿತಾಸಕ್ತಿಯ ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಪ್ರಾದೇಶಿಕ ಮತ್ತು ಬಹುಪಕ್ಷೀಯ ವೇದಿಕೆಗಳಲ್ಲಿ ಅಸ್ತಿತ್ವದಲ್ಲಿರುವ ನಿಕಟ ಸಹಕಾರವನ್ನು ಮುಂದುವರಿಸಲು ಅವರು ಒಪ್ಪಿಕೊಂಡರು.

2025 ಭಾರತ ಮತ್ತು ಪೋರ್ಚುಗಲ್ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 50ನೇ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ ಎಂದು ನಾಯಕರು ಗಮನಿಸಿದರು. ಅವರು ಜಂಟಿಯಾಗಿ ಈ ಸಂದರ್ಭವನ್ನು ಸೂಕ್ತವಾದ ರೀತಿಯಲ್ಲಿ ಆಚರಿಸಲು ಒಪ್ಪಿಕೊಂಡರು. ಇಬ್ಬರೂ ನಾಯಕರು ಪರಸ್ಪರ ಸಂಪರ್ಕದಲ್ಲಿರಲು ಒಪ್ಪಿಕೊಂಡರು.

 

*****