Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರಿಂದ ಸಂತಾಪ 


ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಕರ್ನಾಟಕದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅವರು ಹೆಚ್ಚಿನ‌ ಆದ್ಯತೆ ನೀಡಿದ್ದ ನೇತಾರ ಎಂದು ಶ್ರೀ ಮೋದಿ ಅವರು ಎಂದು ಶ್ಲಾಘಿಸಿದ್ದಾರೆ. 

ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: 
“ಶ್ರೀ ಎಸ್.ಎಂ.ಕೃಷ್ಣ ಅವರು ಎಲ್ಲ ವರ್ಗದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಅಪ್ರತಿಮ ನಾಯಕರಾಗಿದ್ದರು. ಇತರರ ಜೀವನವನ್ನು ಸುಧಾರಿಸಲು ಅವರು ಸತತವಾಗಿ ಶ್ರಮಿಸಿದ್ದರು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷವಾಗಿ ಗಮನಹರಿಸಿದ್ದರು. ಶ್ರೀ ಎಸ್.ಎಂ.ಕೃಷ್ಣ ಅವರು ಹೆಚ್ಚಿನ ಓದುಗರು ಮತ್ತು ಚಿಂತಕರಾಗಿದ್ದರು.

“ಶ್ರೀ ಎಸ್‌ ಎಂ ಕೃಷ್ಣ ಅವರೊಂದಿಗೆ ಅನೇಕ ವರ್ಷಗಳು ಸಂವಹನ ನಡೆಸುವ ಅನೇಕ ಅವಕಾಶಗಳನ್ನು ಪಡೆದಿದ್ದೆ ಮತ್ತು ಆ ಸಂವಾದಗಳನ್ನು ನಾನು ಸದಾ ಸ್ಮರಿಸುತ್ತೇನೆ. ಅವರ ನಿಧನದಿಂದ ನನಗೆ ಅತೀವ ದುಃಖವಾಗಿದೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು. ಓಂ ಶಾಂತಿ.”

“ಶ್ರೀ ಎಸ್.ಎಂ ಕೃಷ್ಣ ಅವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೆ ಶ್ರಮಿಸಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದನ್ನು ಸ್ಮರಿಸಿಕೊಳ್ಳಲಾಗುತ್ತದೆ. ಶ್ರೀ ಎಸ್.ಎಂ ಕೃಷ್ಣ ಅವರು ಸಮೃದ್ಧ ಓದುಗ ಮತ್ತು ಚಿಂತಕರೂ ಆಗಿದ್ದರು.”

 

 

*****