ಕುವೈತ್ ಭೇಟಿಯ ಮೊದಲ ಕಾರ್ಯಕ್ರಮವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಕುವೈತ್ ನ ಮಿನಾ ಅಬ್ದುಲ್ಲಾ ಪ್ರದೇಶದಲ್ಲಿರುವ ಸುಮಾರು 1500 ಭಾರತೀಯ ಪ್ರಜೆಗಳ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಿದರು. ಪ್ರಧಾನಮಂತ್ರಿಯವರು ಭಾರತದ ವಿವಿಧ ರಾಜ್ಯಗಳ ಅನೇಕ ವರ್ಗದ ಭಾರತೀಯ ಕಾರ್ಮಿಕರೊಂದಿಗೆ ಸಂವಾದ ನಡೆಸಿ, ಅವರ ಯೋಗಕ್ಷೇಮವನ್ನು ವಿಚಾರಿಸಿದರು.
ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡುವುದು ವಿದೇಶದಲ್ಲಿರುವ ಭಾರತೀಯ ಕಾರ್ಮಿಕರ ಕಲ್ಯಾಣಕ್ಕೆ ಪ್ರಧಾನಮಂತ್ರಿಯವರು ನೀಡಿರುವ ಪ್ರಾಮುಖ್ಯತೆಯ ಸಂಕೇತವಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಸರ್ಕಾರವು ವಿದೇಶದಲ್ಲಿರುವ ಭಾರತೀಯ ಕಾರ್ಮಿಕರ ಕಲ್ಯಾಣಕ್ಕಾಗಿ ಇ-ಮೈಗ್ರೇಟ್ ಪೋರ್ಟಲ್, ಮದದ್ ಪೋರ್ಟಲ್ ಮತ್ತು ನವೀಕರಿಸಿದ ಪ್ರವಾಸಿ ಭಾರತೀಯ ಬಿಮಾ ಯೋಜನೆಯಂತಹ ಹಲವಾರು ತಂತ್ರಜ್ಞಾನ ಆಧಾರಿತ ಉಪಕ್ರಮಗಳನ್ನು ಕೈಗೊಂಡಿದೆ.
*****