ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಇಂದು ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎಲ್ಲ ದೇಶವಾಸಿಗಳಿಗೆ ಶುಭ ಹಾರೈಸಿದ್ದಾರೆ. “ಶತಮಾನಗಳ ತ್ಯಾಗ, ತಪಸ್ಸು ಮತ್ತು ಹೋರಾಟದ ನಂತರ ಪರಿಶ್ರಮದಿಂದ ನಿರ್ಮಿಸಲಾದ ಈ ದೇವಾಲಯವು ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಶ್ರೇಷ್ಠ ಪರಂಪರೆಯಾಗಿದೆ” ಎಂದು ಶ್ರೀ ಮೋದಿಯವರು ಹೇಳಿದ್ದಾರೆ.
ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:
“ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದಂದು ಎಲ್ಲಾ ದೇಶವಾಸಿಗಳಿಗೆ ನನ್ನ ಅನೇಕ ಶುಭಾಶಯಗಳು. ಶತಮಾನಗಳ ತ್ಯಾಗ, ತಪಸ್ಸು ಮತ್ತು ಹೋರಾಟದಿಂದ ನಿರ್ಮಿಸಲಾದ ಈ ದೇವಾಲಯವು ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ದೊಡ್ಡ ಉದಾಹರಣೆಯಾಗಿದೆ. ಈ ದೈವಿಕ-ಭವ್ಯವಾದ ರಾಮ ಮಂದಿರವು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪ ಸಾಧನೆಗೆ ದೊಡ್ಡ ಸ್ಫೂರ್ತಿಯಾಗಲಿದೆ ಎಂದು ನಾನು ಆಶಿಸುತ್ತೇನೆ” ಎಂದು ಹೇಳಿದ್ದಾರೆ.
*****
अयोध्या में रामलला की प्राण-प्रतिष्ठा की प्रथम वर्षगांठ पर समस्त देशवासियों को बहुत-बहुत शुभकामनाएं। सदियों के त्याग, तपस्या और संघर्ष से बना यह मंदिर हमारी संस्कृति और अध्यात्म की महान धरोहर है। मुझे विश्वास है कि यह दिव्य-भव्य राम मंदिर विकसित भारत के संकल्प की सिद्धि में एक… pic.twitter.com/DfgQT1HorT
— Narendra Modi (@narendramodi) January 11, 2025