Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಕಾಲಾತೀತ ಆಧ್ಯಾತ್ಮಿಕ ಪರಂಪರೆಯನ್ನು ಮಹಾ ಕುಂಭ ಮೇಳವು ಸಾಕಾರಗೊಳಿಸುತ್ತದೆ ಮತ್ತು ನಂಬಿಕೆ ಮತ್ತು ಸಾಮರಸ್ಯವನ್ನು ಆಚರಿಸುತ್ತದೆ: ಪ್ರಧಾನಮಂತ್ರಿ


ಪ್ರಯಾಗ್ ರಾಜ್ ನಲ್ಲಿ 2025ರ ಮಹಾಕುಂಭ ಮೇಳ ಆರಂಭವಾಗುತ್ತಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭ ಹಾರೈಸಿದ್ದಾರೆ. “ಭಾರತೀಯ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಪಾಲಿಸುವ ಕೋಟ್ಯಂತರ ಜನರಿಗೆ ಇದು ಬಹಳ ವಿಶೇಷವಾದ ದಿನವಾಗಿದೆ. ಮತ್ತು, ಭಾರತದ ಕಾಲಾತೀತ ಆಧ್ಯಾತ್ಮಿಕ ಪರಂಪರೆಯನ್ನು ಮಹಾ ಕುಂಭಮೇಳವು ಸಾಕಾರಗೊಳಿಸುತ್ತದೆ ಮತ್ತು ನಂಬಿಕೆ ಮತ್ತು ಸಾಮರಸ್ಯವನ್ನು ಆಚರಿಸುತ್ತದೆ” ಎಂದು ಶ್ರೀ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ತಾಣದ ಸಂದೇಶದಲ್ಲಿ ಈ ರರೀತಿ ಸಂದೇಶ ಹಂಚಿಕೊಂಡಿದ್ದಾರೆ:

“ಭಾರತೀಯ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಪಾಲಿಸುವ ಕೋಟ್ಯಂತರ ಜನರಿಗೆ ಇದು ಬಹಳ ವಿಶೇಷವಾದ ದಿನ!”
“ಮಹಾ ಕುಂಭ ಮೇಳ 2025 ಪ್ರಯಾಗ್ ರಾಜ್ ನಲ್ಲಿ ಆರಂಭವಾಗಲಿದ್ದು, ನಂಬಿಕೆ, ಭಕ್ತಿ ಮತ್ತು ಸಂಸ್ಕೃತಿಯ ಪವಿತ್ರ ಸಂಗಮದಲ್ಲಿ ಅಸಂಖ್ಯಾತ ಜನರನ್ನು ಒಟ್ಟುಗೂಡಿಸಲಿದೆ. ಭಾರತದ ಕಾಲಾತೀತ ಆಧ್ಯಾತ್ಮಿಕ ಪರಂಪರೆಯನ್ನು ಮಹಾ ಕುಂಭಮೇಳವು ಸಾಕಾರಗೊಳಿಸುತ್ತದೆ ಮತ್ತು ನಂಬಿಕೆ ಮತ್ತು ಸಾಮರಸ್ಯವನ್ನು ಆಚರಿಸುತ್ತದೆ.”

“ಪ್ರಯಾಗ್ ರಾಜ್ ನಲ್ಲಿ ಪವಿತ್ರ ಸ್ನಾನ ಮಾಡಿ ಆಶೀರ್ವಾದ ಪಡೆಯಲು ಅಸಂಖ್ಯಾತ ಜನರು ಬರುವುದನ್ನು ನೋಡಿ ನನಗೆ ಸಂತೋಷವಾಗಿದೆ.”

“ಎಲ್ಲಾ ಯಾತ್ರಿಕರಿಗೆ ಮತ್ತು ಪ್ರವಾಸಿಗರಿಗೆ ಸೋಜಿಗದ ಅತ್ಯುತ್ತಮ ವಾಸ್ತವ್ಯವನ್ನು ಹಾರೈಸುತ್ತೇನೆ.”

“पौष पूर्णिमा पर पवित्र स्नान के साथ ही आज से प्रयागराज की पुण्यभूमि पर महाकुंभ का शुभारंभ हो गया है। हमारी आस्था और संस्कृति से जुड़े इस दिव्य अवसर पर मैं सभी श्रद्धालुओं का हृदय से वंदन और अभिनंदन करता हूं। भारतीय आध्यात्मिक परंपरा का यह विराट उत्सव आप सभी के जीवन में नई ऊर्जा और उत्साह का संचार करे, यही कामना है।” 

 

*****