Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಿಷನ್ ಸ್ಕಾಟ್ ಯಶಸ್ಸಿನ ಬಗ್ಗೆ ಭಾರತೀಯ ಬಾಹ್ಯಾಕಾಶ ನವೋದ್ಯಮ ದಿಗಂತರಾವನ್ನು ಶ್ಲಾಘಿಸಿದ ಪ್ರಧಾನಮಂತ್ರಿ


ಮಿಷನ್ ಸ್ಕಾಟ್ ಯಶಸ್ಸಿನ ಬಗ್ಗೆ ಭಾರತೀಯ ಬಾಹ್ಯಾಕಾಶ ನವೋದ್ಯಮ ದಿಗಂತರಾವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮನಸಾರೆ ಶ್ಲಾಘಿಸಿದ್ದಾರೆ. ಬಾಹ್ಯಾಕಾಶ ಪರಿಸ್ಥಿತಿಯ ಬಗ್ಗೆ ಅರಿವು ಹೆಚ್ಚಿಸುವಲ್ಲಿ ಬೆಳೆಯುತ್ತಿರುವ ಭಾರತೀಯ ಬಾಹ್ಯಾಕಾಶ ಉದ್ಯಮದ ಪ್ರಮುಖ ಕೊಡುಗೆಯಾಗಿದೆ ಎಂದು ಅವರು ಹೇಳಿದ್ದಾರೆ.

ಎಕ್ಸ್ ಖಾತೆಯಲ್ಲಿ ದಿಗಂತರಾದ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿಗಳು,

“ಮಿಷನ್ ಸ್ಕಾಟ್ ಯಶಸ್ಸಿನ ಬಗ್ಗೆ ಭಾರತೀಯ ಬಾಹ್ಯಾಕಾಶ ನವೋದ್ಯಮ @Digantarahq ಅಭಿನಂದನೆಗಳು. ಬಾಹ್ಯಾಕಾಶ ಪರಿಸ್ಥಿತಿಯ ಅರಿವನ್ನು ಹೆಚ್ಚಿಸುವಲ್ಲಿ ಬೆಳೆಯುತ್ತಿರುವ ಭಾರತೀಯ ಬಾಹ್ಯಾಕಾಶ ಉದ್ಯಮದ ಪ್ರಮುಖ ಕೊಡುಗೆ ಇದಾಗಿದೆ.” ಎಂದು ಬರೆದುಕೊಂಡಿದ್ದಾರೆ.

 

 

*****