Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಮಂತ್ರಿ ಗೌರವ ನಮನ


ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಶ್ರೀ ಠಾಕ್ರೆ ಅವರ ಬದ್ಧತೆಗಾಗಿ ಅವರನ್ನು ವ್ಯಾಪಕವಾಗಿ ಗೌರವಿಸಲಾಗುತ್ತದೆ ಮತ್ತು ಸ್ಮರಿಸಲಾಗುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. 

ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ದಿನದಂದು ನಾನು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಸಾರ್ವಜನಿಕ ಕಲ್ಯಾಣ ಮತ್ತು ಮಹಾರಾಷ್ಟ್ರದ ಅಭಿವೃದ್ಧಿಗಾಗಿನ ಅವರ ಬದ್ಧತೆಗಾಗಿ ಅವರನ್ನು ವ್ಯಾಪಕವಾಗಿ ಗೌರವಿಸಲಾಗುತ್ತದೆ ಮತ್ತು ಸ್ಮರಿಸಲಾಗುತ್ತದೆ. ತಮ್ಮ ಮೂಲ ನಂಬಿಕೆಗಳ ವಿಷಯಕ್ಕೆ ಬಂದಾಗ ಅವರು ರಾಜಿ ಮಾಡಿಕೊಳ್ಳುತ್ತಿರಲಿಲ್ಲ ಮತ್ತು ಭಾರತೀಯ ಸಂಸ್ಕೃತಿಯ ಹೆಮ್ಮೆಯನ್ನು ವರ್ಧಿಸುವಲ್ಲಿ ಅವರು ಸದಾ ಕೊಡುಗೆ ನೀಡಿದ್ದರು.”

 

 

*****