Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬೆಲ್ಜಿಯಂ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ತ್ ದೆ ವೇವರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ


ಬೆಲ್ಜಿಯಂನ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ಟ್ ದೆ ವೇವರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತ-ಬೆಲ್ಜಿಯಂ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸಲು ಹಾಗೂ ಜಾಗತಿಕ ವಿಷಯಗಳಲ್ಲಿ ಸಹಯೋಗವನ್ನು ಹೆಚ್ಚಿಸಲು ಒಟ್ಟಾಗಿ ಕಾರ್ಯನಿರ್ವಹಿಸುವ ವಿಶ್ವಾಸವನ್ನು ಶ್ರೀ ನರೇಂದ್ರ ಮೋದಿ ಅವರು ವ್ಯಕ್ತಪಡಿಸಿದ್ದಾರೆ.

ಅವರು ಎಕ್ಸ್ ಪೋಸ್ಟ್ ನಲ್ಲಿ‌ ಹೀಗೆ ಬರೆದಿದ್ದಾರೆ: 

“ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ @Bart_DeWever ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಭಾರತ-ಬೆಲ್ಜಿಯಂ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಮತ್ತು ಜಾಗತಿಕ ವಿಷಯಗಳಲ್ಲಿ ನಮ್ಮ ಸಹಯೋಗವನ್ನು ಹೆಚ್ಚಿಸಲು ಒಟ್ಟಾಗಿ ಕಾರ್ಯ ನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ. ನಿಮ್ಮ ಅಧಿಕಾರಾವಧಿ ಯಶಸ್ವಿಯಾಗಿರಲಿ ಎಂದು  ಹಾರೈಸುತ್ತೇನೆ.”

 

 

*****