Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತವು ಎಐ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ, ಸಾರ್ವಜನಿಕ ಹಿತದೃಷ್ಟಿಯಿಂದ ಅದನ್ನು ಬಳಸಿಕೊಳ್ಳುತ್ತಿದೆ: ಪ್ರಧಾನಮಂತ್ರಿ


ಭಾರತವು ಎಐ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ, ಸಾರ್ವಜನಿಕ ಹಿತದೃಷ್ಟಿಯಿಂದ ಅದನ್ನು ಬಳಸಿಕೊಳ್ಳುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಜಗತ್ತು ಭಾರತದಲ್ಲಿ ಹೂಡಿಕೆ ಮಾಡಲು ಮತ್ತು ನಮ್ಮ ಯುವ ಶಕ್ತಿಯ ಮೇಲೆ ಪಣತೊಡಲು ಬರಬೇಕೆಂದು ಒತ್ತಾಯಿಸಿದರು.

ಗೂಗಲ್  ಮತ್ತು ಆಲ್ಫಾಬೆಟ್ ಗಳ ಸಿಇಒ ಶ್ರೀ ಸುಂದರ್ ಪಿಚೈ ಅವರನ್ನು ಭೇಟಿ ಮಾಡಿದ್ದಕ್ಕೆ ತೃಪ್ತಿ ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ಪಿಚೈ ಅವರು ಎಕ್ಸ್ ತಾಣದಲ್ಲಿ ತಿಳಿಸಿದ ಸಂದೇಶಕ್ಕೆ ಈ ಕೆಳಗಿನಂತೆ ಪ್ರತಿಕ್ರಿಯಿಸಿದ್ದಾರೆ:

“@sundarpichai ಅವರೇ, ನಿಮ್ಮನ್ನು ಭೇಟಿಯಾಗಿದ್ದಕ್ಕಾಗಿ ಸಂತೋಷವಾಗಿದೆ. ಭಾರತವು ಎಐ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಅದನ್ನು ಬಳಸಿಕೊಳ್ಳುತ್ತಿದೆ. ನಮ್ಮ ದೇಶದಲ್ಲಿ ಹೂಡಿಕೆ ಮಾಡಲು ಮತ್ತು ನಮ್ಮ ಯುವ ಶಕ್ತಿಯ ಮೇಲೆ ಪಣತೊಡಲು ನಾವು ಜಗತ್ತನ್ನು ಒತ್ತಾಯಿಸುತ್ತೇವೆ!”

 

 

*****